ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಬಸವರಾಜ ತಳವಾರ್ ಚಾಲನೆ ನೀಡಿದರು.
ಗುಂಡ್ಲುಪೇಟೆ: ಎಚ್‌ಐವಿ ಸೋಂಕಿತರನ್ನು ಸಮಾಜದಲ್ಲಿ ಕಾಣುವ ರೀತಿಯಿಂದ ರೋಗಿಗಳು ಆಘಾತಕ್ಕೊಳಗಾಗುತ್ತಿದ್ದು ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮ ಚಾಲನೆ ನೀಡಿ ಅವರು ಮಾತನಾಡಿದರು. ಎಚ್‌ಐವಿ ಸೋಂಕಿತರೊಂದಿಗೆ ಮಾತನಾಡಿದರೆ ರೋಗ ಹರಡುವುದಿಲ್ಲ ಹಾಗೂ ಅವರಿಗೆ ತೊಂದರೆ ನೀಡಿದರೆ ಅಂಥವರಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದರು.
ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಟಿ.ದೀಪು, ಆಸ್ಪತ್ರೆಯ ಆಡಳಿತ ವೈದ್ಯರಾದ ಡಾ.ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶಾ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ ಸೇರಿದಂತೆ ಹಲವರು ಇದ್ದರು