ನರೇಂದ್ರಮೋದಿ ಪ್ರಧಾನ ಮಂತ್ರಿಗಳಾಗಿ 12 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಗುಂಡ್ಲುಪೇಟೆ: ನರೇಂದ್ರಮೋದಿ ಪ್ರಧಾನ ಮಂತ್ರಿಗಳಾಗಿ 12 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಪೂಜೆಯ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾಯಿತ ಪ್ರಧಾನ ಮಂತ್ರಿಗಳಾಗಿ 12 ವರ್ಷ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಸುದೀರ್ಘ ಸೇವಾವಧಿಯಲ್ಲಿ ಯಾವುದೇ ಕಳಂಕ ಇಲ್ಲದೆ ದೇಶದ ಎಲ್ಲ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದು ಸುಲಭದ ಮಾತಲ್ಲ. ಅಂತಹ ಸಾಧನೆ ಮೋದಿ ಅವರಿಂದ ಆಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಂಜನೇಯಸ್ವಾಮಿ ಹೆಚ್ಚಿನ ಆಯುಷ್ಯ, ಆರೋಗ್ಯ ಭಾಗ್ಯವನ್ನು ಕರುಣಿಸಲಿ. ಇವರು ಇನ್ನಷ್ಟು ವರ್ಷ ದೇಶ ಸೇವೆ ಮಾಡಲು ದೇವರು ಚೈತನ್ಯ ದಯಪಾಲಿಸಲೆಂದು ಪ್ರಾರ್ಥಿಸಿದೆವು ಎಂದು ತಿಳಿಸಿದರು.
ಪಕ್ಷದ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮಾಜಿ ಅಧ್ಯಕ್ಷ ಎಲ್.ಸುರೇಶ್, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್.ಶಿವಪ್ರಸಾದ್, ಚನ್ನಮಲ್ಲೀಪುರ ಬಸವಣ್ಣ, ಎಚ್.ವಿ.ಮಂಜುನಾಥ್, ಮಹೇಂದ್ರ, ಮಂಜು ಬೆಳವಾಡಿ ಸೇರಿದಂತೆ ಪಕ್ಷದ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.