ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ತ್ರಿಯಂಬಕಪುರ ಗ್ರಾಮದಲ್ಲಿ ಡೆಂೆ ವಿರೋಧಿ ದಿನವನ್ನು ಆಚರಿಸಲಾಯಿತು.
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ತ್ರಿಯಂಬಕಪುರ ಗ್ರಾಮದಲ್ಲಿ ಡೆಂೆ ವಿರೋಧಿ ದಿನವನ್ನು ಆಚರಿಸಲಾಯಿತು.
ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ
ನಾಗೇಂದ್ರ ಮಾತನಾಡಿ, ಡೆಂೆ ಸೊಳ್ಳೆಯಿಂದ ಹರಡುತ್ತದೆ. ಸೊಳ್ಳೆಗಳು ಶುದ್ಧವಾದ ನೀರಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡಿ ಹಗಲು ಹೊತ್ತು ಕಚ್ಚುವುದರಿಂದ ಜ್ವರ ಕಾಣಿಸಿಕೊಳ್ಳುತ್ತದೆ. ಆದುದರಿಂದ ಸೊಳ್ಳೆ ಉತ್ಪತ್ತಿ ತಾಣಗಳನ್ನು ನೀರು ನಿಲ್ಲದಂತೆ ಎಚ್ಚರ ವಹಿಸುವಂತೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುದರ್ಶನ್, ಸವಿತಾ ಗ್ರಾಮದ ಮುಖಂಡರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.