ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಧುವನಹಳ್ಳಿ ಶಿವಕುಮಾರ್  
ಚಾಮರಾಜನಗರ

ಹನೂರು ಕ್ಷೇತ್ರಕ್ಕೆ ಎಚ್‌ಸಿಎಂ, ಸುನೀಲ್ ಬೋಸ್ ಕೊಡುಗೆ ಅಪಾರ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ ಹೇಳಿಕೆ
ಕೊಳ್ಳೇಗಾಲ: ಪ್ರಸ್ತುತ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ 490 ಕೋಟಿ ರೂ.ಅನುದಾನ ನೀಡುವ ಮೂಲಕ ಕ್ಷೇತ್ರದ ಜನರಿಗೆ ಮತ್ತು ರೈತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಉತ್ತಮ ಕೊಡುಗೆ ನೀಡಿರುವುದು ಸಂತೋಷ ಸಂಗತಿ ಎಂದು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ ಹೇಳಿದ್ದಾರೆ.
ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಸಂಸದ ಸುನೀಲ್ ಬೋಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದು ಹನೂರು ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಪ್ಪಿಗೆ ಕೊಡಿಸಿದ್ದಾರೆ ಎಂದು ಶನಿವಾರ ‘ವಿಜಯವಾಣಿ’ಗೆ ತಿಳಿಸಿದ್ದಾರೆ.
ಮಾಜಿ ಶಾಸಕ ನರೇಂದ್ರ ಅವರೂ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಪ್ಪಿಗೆ ಸಿಗುವ ಕಾರ್ಯದಲ್ಲಿ ಮುಂಜಾಗ್ರತೆ ವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಅಲ್ಲದೆ ಕಳೆದ ಕೆಲ ತಿಂಗಳಿಂದ ಹನೂರು ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳ ಬೇಕೆಂದು ರೈತರು ಪ್ರತಿಭಟನೆ ನಡೆಸಿದ್ದರು ಎಂದು ಹೇಳಿದ್ದಾರೆ.