ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭದಲ್ಲಿ ಶಿವಕುಮಾರ್ ಮಾತನಾಡಿದರು. ಚೈತ್ರಾ ಇದ್ದರು. 
ಚಾಮರಾಜನಗರ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮನೆಪಾಠ

ಎಂ.ರವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಅಧಿಕಾರಿ ಚೈತ್ರಾ ಮಾಹಿತಿ

ಗುಂಡ್ಲುಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ಕೈಗೊಂಡಿದ್ದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಸಹ ನೀಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಸಮನ್ವಯಾಧಿಕಾರಿ ಚೈತ್ರಾ ಹೇಳಿದರು.
ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಸಮಾಜದ ಹಿತದೃಷ್ಟಿಯಲ್ಲಿ ಮಹಿಳೆಯರಿಗೆ ತರಬೇತಿ ಆರೋಗ್ಯ ತಪಾಸಣೆ ಶಿಬಿರ, ಪ್ರಾಣಿಗಳು ಹಾಗೂ ಪಕ್ಷಿಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕೆರೆ ನಿರ್ಮಾಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ, ಮಾಸಾಶನ, ವಾತ್ಸಲ್ಯ ಕಾರ್ಯಕ್ರಮದಲ್ಲಿ ನಿರ್ಗತಿಕರಿಗೆ ಮನೆ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಲು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ನಡೆಸಲಾಗುತ್ತಿದೆ ಎಂದು ಹೇಳಿದರು.
ಶಾಲೆಯ ಶಿಕ್ಷಕ ಶಿವಕುಮಾರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳಿಗೆ ಟ್ಯೂಷನ್ ಕೊಡುತ್ತಿರುವುದರಿಂದ ಮಕ್ಕಳಿಗೆ ಕಲಿಕೆ ಮಟ್ಟ ಸುಧಾರಿಸಿ ಹೆಚ್ಚಿನ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.\
ನಂತರ ಮಕ್ಕಳಿಗೆ ಪುಸ್ತಕ ಮತ್ತು ಪೆನ್ ನೀಡಲಾಯಿತು. ಶಾಲೆಯ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.