ಮಾರ್ಟಳ್ಳಿಯ ಬಾರ್‌ವೊಂದರಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದರು. 
ಚಾಮರಾಜನಗರ

ಅಕ್ರಮವಾಗಿ ಶೇಖರಿಸಿದ್ದ ಮದ್ಯ ವಶ

ಅಭಿನಯ್ ಎಚ್.ಎಂ
ಹನೂರು: ತಾಲೂಕಿನ ಮಾರ್ಟಳ್ಳಿಯ ಬಾರ್‌ವೊಂದರ ಶೆಡ್‌ನಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಿಸಿದ್ದ ಮದ್ಯವನ್ನು ಭಾನುವಾರ ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಸಾಗಣೆ ಮಾಡುವ ಉದ್ದೇಶದಿಂದ ಗ್ರಾಮದ ಗೋಲ್ಟರ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಶೆಡ್‌ನಲ್ಲಿ ಮದ್ಯವನ್ನು ಶೇಖರಿಸಿದ್ದರು. ಈ ಬಗ್ಗೆ ತಿಳಿದ ಗ್ರಾಮಸ್ಥರು ರಾತ್ರಿ 9ರ ವೇಳೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿ ಮರುದಾ ಅವರು 112ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಪರಿಶೀಲಿಸಿದರು. ಗ್ರಾಮಸ್ಥರ ಸಮ್ಮುಖದಲ್ಲಿ 90 ಮಿಲಿಯ 97 ಪೌಚ್‌ಗಳನ್ನು ವಶಕ್ಕೆ ಪಡೆದರು. ಪ್ರಕರಣ ದಾಖಲಿಸಿಕೊಂಡ ರಾಮಾಪುರ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.