ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಜಿಲ್ಲಾಧಿಕಾರಿ ಶ್ರೀರೂಪಾ ಉದ್ಘಾಟಿಸಿದರು. ಎ.ಈ ರಘು, ಚಂದ್ರಶೇಖರ್, ಆಶ್ರಫುಲ್ ಹಸನ್, ಕಿರಣ್ ಇತರರಿದ್ದರು.  
ಚಾಮರಾಜನಗರ

ಘನ ತ್ಯಾಜ್ಯ ನಿರ್ವಹಣೆ ಯಂತ್ರೋಪಕರಣ ಉದ್ಘಾಟನೆ

ಅಭಿನಯ್ ಎಚ್.ಎಂ
ಹನೂರು: ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ ಅಭಿಯಾನ ಅಂಗವಾಗಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಜಿಲ್ಲಾಧಿಕಾರಿ ಶ್ರೀರೂಪಾ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಮ.ಬೆಟ್ಟದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಹಾಗೂ ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಹಾಗೂ ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಮ. ಬೆಟ್ಟವನ್ನು ಪ್ಲಾಸ್ಟಿಕ್‌ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೈಜೋಡಿಸುವುದರ ಮೂಲಕ ಶ್ರೀ ಕ್ಷೇತ್ರದ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಡಿಸಿ ಶ್ರೀರೂಪಾ ತಿಳಿಸಿದರು.
ಶ್ರೀ ೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಶ್ರಫುಲ್ ಹಸನ್, ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು ಇದ್ದರು.