ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಪುಟ್ಟಸ್ವಾಮಿ ರಾಮಸಮುದ್ರ, ಆರ್.ವಿರೂಪಾಕ್ಷ, ಪ್ರತಿಭಾ ಮತ್ತು ವಕೀಲರು ಇದ್ದರು.
- ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಅಭಿಮತ
- ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ
ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಪವಿತ್ರವಾದ ಸಂವಿಧಾನ ಬರೆದು ಕೊಡುವ ಮೂಲಕ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ ಎಂದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಜ್ಞಾನಿ, ಸಮಾಜ ಸುಧಾರಕರು, ಅರ್ಥಶಾಸ್ತ್ರಜ್ಞರು ಆಗಿದ್ದರು. ಅವರ ಕೊಡುಗೆ ಅಪಾರವಾಗಿದೆ. ಅವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರು. ಶಿಕ್ಷಣದಿಂದಲ್ಲೇ ಅಭಿವೃದ್ಧಿ ಸಾಧ್ಯವೆಂದು ಪ್ರತಿಯೊಬ್ಬರಿಗೂ ಶಿಕ್ಷಣವನ್ನು ಸಂವಿಧಾನದ ಮೂಲಕ ಕಲ್ಪಿಸಿದರು ಎಂದರು.
ಹಿರಿಯ ವಕೀಲ ಆರ್.ವಿರೂಪಾಕ್ಷ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಉತ್ತಮ ಸಂಶೋಧಕರಾಗಿದ್ದರು. ಅವರು ಪ್ರತಿಯೊಂದು ವಿಚಾರವನ್ನು ದಾಖಲೆಯ ಸಮೇತದಲ್ಲಿ ತಿಳಿಸಿದ್ದಾರೆ. ಬುದ್ಧ ಮತ್ತು ಧಮ್ಮದ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ ಎಂದರು. ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಪ್ರತಿಭಾ ಸೇರಿದಂತೆ ಹಿರಿಯ ಹಾಗೂ ಕಿರಿಯ ವಕೀಲರು ಇದ್ದರು.