ಕೊಳ್ಳೇಗಾಲ: ತಾಲೂಕಿನ ಸಿಂಗನಲ್ಲೂರು ಗ್ರಾಮದ ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ.
ದೊಡ್ಡಿಂದುವಾಡಿ ಗ್ರಾಮದ ಮಾದಯ್ಯ(60) ಮೃತರು. ಬೈಕ್‌ನಲ್ಲಿ ದೊಡ್ಡಿಂದುವಾಡಿ ಕಡೆಗೆ ಮಂಗಳವಾರ ಹೋಗುತ್ತಿದ್ದಾಗ ಮಲೆ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಗಾಯಾಳನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಗಾಯಾಳು ಮೃತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.