ಗುಂಡ್ಲುಪೇಟೆ ತಾಲೂಕಿನ ಶಿವನಸಮುದ್ರ ಗ್ರಾಮದ ಶ್ರೀ ಮಧ್ಯರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾಮಗಾರಿಯನ್ನು ಗುರುವಾರ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ವೀಕ್ಷಿಸಿದರು. ಸಿ.ಟಿ.ಶಿಲ್ಪಾನಾಗ್, ಬಸವರಾಜು, ಸುರೇಶ್ ಇತರರು ಇದ್ದರು. 
ಚಾಮರಾಜನಗರ

ದೇವಾಲಯ ಜೀರ್ಣೋದ್ಧಾರ ಕಾರ್ಯ ಪರಿಶೀಲನೆ

ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರ ಗ್ರಾಮದ ಶ್ರೀ ಮಧ್ಯ ರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾಮಗಾರಿಯನ್ನು ಗುರುವಾರ ಹನೂರು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಮಾತನಾಡಿದ ಅವರು, ದೇವಾಲಯ ಜೀರ್ಣೋದ್ಧಾರ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಇತಿಹಾಸ ಪ್ರಸಿದ್ಧ ದೇವಾಲಯ ಕಾಮಗಾರಿಯನ್ನು ಜನವರಿ ಅಥವಾ ಫೆಬ್ರುವರಿ ತಿಂಗಳಲ್ಲಿ ಪೂರ್ಣಗೊಳಿಸಿ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಎಲ್ಲ ಸಚಿವರನ್ನು ಕರೆಯಿಸಿ ಲೋಕಾರ್ಪಣೆ ಮಾಡುವುದಾಗಿ ತಿಳಿಸಿದರು.
ಶ್ರೀ ಮಧ್ಯರಂಗನಾಥಸ್ವಾಮಿ ದೇವಾಲಯ ಮುಂಭಾಗವಿರುವ ರಾಜಬೀದಿ ಅಭಿವೃದ್ಧಿಯನ್ನು ಮಾಡುವ ಚಿಂತನೆ ಇದೆ. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಾನು ಹೇಳಿರುವ ಅವಧಿಯಲ್ಲಿ ಜೀರ್ಣೋದ್ಧಾರ ಕೆಲಸಗಳು ಪೂರ್ಣಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ದಿಲೀಪ್‌ಕುಮಾರ್ ಮೀನಾ, ತಹಸೀಲ್ದಾರ್ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಚಾರುಲತಾ ಜೈನ್, ವಿಶ್ವ, ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಸೆಸ್ಕ್ ಎಇಇ ರಾಜು, ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ, ಮುಜರಾಯಿ ಇಲಾಖೆಯ ಸುರೇಶ್, ನಿರ್ಮಿತಿ ಕೇಂದ್ರ ಇಲಾಖೆ ರವಿಕುಮಾರ್ ಹಾಗೂ ಇತರ ಅಧಿಕಾರಿಗಳು, ಮು ಖಂಡರು ಇದ್ದರು.