ಚಾಮರಾಜನಗರದ ನಗರೋತ್ಥಾನ 4ನೇ ಹಂತದ ಯೋಜನೆಯ ಕಾಮಗಾರಿಯನ್ನು ಡಿಸಿ ಶ್ರೀರೂಪಾ ಸೋಮವಾರ ಪರಿಶೀಲಿಸಿದರು. ಅಧಿಕಾರಿಗಳಾದ ವೆಂಕಟೇಶ್, ರಾಮಚಂದ್ರ, ಪ್ರಕಾಶ್ ಇತರರು ಹಾಜರಿದ್ದರು.
- ವಿವಿಧ ಕಡೆಗಳಿಗೆ ಡಿಸಿ ಶ್ರೀರೂಪಾ ಭೇಟಿ
- ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 4ನೇ ಹಂತದ ಯೋಜನೆ
ಚಾಮರಾಜನಗರ: ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 4ನೇ ಹಂತದ ಯೋಜನೆಯಡಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಶ್ರೀರೂಪಾ ಸೋಮವಾರ ಪರಿಶೀಲಿಸಿದರು.
ನಗರದ ವಾರ್ಡ್ ಸಂಖ್ಯೆ 19, 20 ಹಾಗೂ 29ರಲ್ಲಿ ಸುಮಾರು 118 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 1.18 ಕಿ.ಮೀ ಉದ್ದದ ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು. 292 ಮೀಟರ್ ಉದ್ದದ ಚರಂಡಿ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ವೆಂಕಟೇಶ್, ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಾಶ್, ಇತರ ಅಧಿಕಾರಿಗಳು ಇದ್ದರು.