ಮಲ್ಲಯ್ಯನಪುರ ಗ್ರಾಮಕ್ಕೆ ತಾಲೂಕು ಪಂಚಾಯಿತಿ ಇಒ ಉಮೇಶ್ ಭೇಟಿ ನೀಡಿ ಬೋರ್ ರಿಪೇರಿ ಪಡಿಸುವಂತೆ ಪಿಡಿಒ ಆಕಾಶ್‌ಗೆ ಸೂಚಿಸಿದರು. 
ಚಾಮರಾಜನಗರ

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • drinking water problem
ಹನೂರು: ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ವಿಜಯವಾಣಿ ಪ್ರಕಟಿಸಿದ ವರದಿಗೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದೆ. ಬುಧವಾರ ತಾಲೂಕಿನ ಕೌದಳ್ಳಿ ಗ್ರಾಪಂ ವ್ಯಾಪ್ತಿಯ ಮಲ್ಲಯ್ಯನಪುರ ಗ್ರಾಮಕ್ಕೆ ತಾಪಂ ಇಒ ಉಮೇಶ್ ಭೇಟಿ ನೀಡಿ ಬೋರ್ ರಿಪೇರಿ ಪಡಿಸುವಂತೆ ಪಿಡಿಒ ಆಕಾಶ್ ಅವರಿಗೆ ಸೂಚಿಸಿದರು.
ಈ ಬಗ್ಗೆ ಜ.15ರ ವಿಜಯವಾಣಿ ಸಂಚಿಕೆಯಲ್ಲಿ ‘ಕುಡಿವ ನೀರಿನ ಸಮಸ್ಯೆ ಬಗೆಹರಿಸಿ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಈ ಸಂಬಂಧ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ಉಮೇಶ್ ಗ್ರಾಮಸ್ಥರ ಸಮಸ್ಯೆ ಆಲಿಸಿದರು. ಜತೆಗೆ ಪಿಡಿಒ ಆಕಾಶ್ ಅವರಿಗೆ ತಕ್ಷಣ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
ಗ್ರಾಮದಲ್ಲಿ ಸುಮಾರು 100ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೊಂಬೆಯನ್ನು ನಿರ್ಮಿಸಲಾಗಿದ್ದು, ನೀರು ಪೂರೈಕೆ ಸ್ಥಗಿತಗೊಂಡು ಹಲವು ವರ್ಷಗಳೇ ಕಳೆದಿದೆ. ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಪಿಡಿಒ ಅವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.