ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಶ್ರೀರೂಪಾ ಅವರಿಗೆ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಮನವಿ ಸಲ್ಲಿಸಲಾಯಿತು. ಚಾ.ರಂ.ಶ್ರೀನಿವಾಸ್‌ಗೌಡ, ಪಣ್ಯದಹುಂಡಿ ರಾಜು, ಪರ್ವತ್ ರಾಜು, ರಾಚಪ್ಪ ಇನ್ನಿತರರಿದ್ದರು.
- ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಮನವಿ
- ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಕೆ
- ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹ
ಚಾಮರಾಜನಗರ: ರಾಜ್ಯದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ಈ ಬಾರಿಯ ಕೆಪಿಎಸ್‌ಸಿಯಲ್ಲಿ ನಡೆದ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಳೆದ ಎರಡು ದಿನಗಳಿಂದ ಚರ್ಚೆಯಾಗುತ್ತಿದೆ. ಈಗಾಗಲೇ ಅಔಕಾಶ ವಂಚಿತ ವಿದ್ಯಾರ್ಥಿಗಳು ಇದರ ಕುರಿತು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಅದಲ್ಲದೇ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಕೆಪಿಎಸ್‌ಸಿ ಮೂಲಕ ವರದಿ ಕೇಳಿದ್ದಾರೆ.
ಇದರಿಂದ ಮೇಲ್ನೊಟಕ್ಕೆ ಅಕ್ರಮ ನಡೆದಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಿದರು.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದರೇ ಸಾವಿರಾರು ವಿದ್ಯಾರ್ಥಿಗಳಿಎಗ ತೊಂದರೆಯಾಗಲಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ನಿರ್ನಾಮವಾದಂತಾಗುತ್ತದೆ. ಈ ನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆಯ ಅಕ್ರಮ ಕುರಿತು ಸೂಕ್ತ ತನಿಖೆ ನಡೆಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರ ಪಣ್ಯದಹುಂಡಿ ರಾಜು, ಪರ್ವತ್ ರಾಜು, ರಾಚಪ್ಪ ಹಾಗೂ ಇತರರು ಹಾಜರಿದ್ದರು.