ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದ ಜೆಸಿಬಿ ಯಂತ್ರ.  
ಚಾಮರಾಜನಗರ

ಕೆರೆಯಲ್ಲಿ ಅಕ್ರಮ ಮಣ್ಣು ತುಂಬುತ್ತಿದ್ದ ಜೆಸಿಬಿ ವಶ

ಯಳಂದೂರು: ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿರುವ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬುತ್ತಿದ್ದ ಜೆಸಿಬಿಯನ್ನು ವಶಪಡಿಸಿಕೊಳ್ಳಲಾಗಿದೆ.
ದುಗ್ಗಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬುತ್ತಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಎನ್. ಕಾವ್ಯಾ ಅವರಿಗೆ ದೂರವಾಣಿ ಕರೆ ಮೂಲಕ ಸಾರ್ವಜನಿಕರು ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯದರ್ಶಿ ಎಂ.ಸುನೀಲ್ ಅವರನ್ನು ಪರಿಶೀಲಿಸುವಂತೆ ಕಳುಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದಾಗ ಅನುಮತಿ ಪಡೆಯದೆ ಮಣ್ಣು ತುಂಬುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಪಿಡಿಒ ಕೂಡ ಸ್ಥಳ ಪರಿಶೀಲನೆ ನಡೆಸಿ ಜೆಸಿಬಿ ವಶಪಡಿಸಿಕೊಂಡು ಪಟ್ಟಣ ಪೊಲೀಸ್ ಠಾಣೆಗೆ ಒಪ್ಪಿಸಿ ದೂರು ನೀಡಿದ್ದಾರೆ.