ಕೊಳ್ಳೇಗಾಲದ ಗುರುಭವನದಲ್ಲಿ ಭಾನುವಾರ ತಾಲೂಕು ಉಪ್ಪಾರ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಗಣ್ಯರು ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕರಿಸಿದರು. ಎ.ಆರ್. ಕೃಷ್ಣಮೂರ್ತಿ, ಪ್ರಿಯಶಂಕರ್, ರಾಜೇಂದ್ರ, ಶಿವಕುಮಾರ್, ಯೋಗೇಶ್, ರಮೇಶ್, ಸೋಮಣ್ಣ ಇತರರು ಇದ್ದರು.  
ಚಾಮರಾಜನಗರ

ಶ್ರಮದಿಂದ ಮಾತ್ರ ಗುರಿ ತಲುಪಲು ಸಾಧ್ಯ

ಎ. ಆರ್. ರಘುರಾಮ
ಕೊಳ್ಳೇಗಾಲ : ಶ್ರಮದಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಭಾನುವಾರ ಕೊಳ್ಳೇಗಾಲ ಮತ್ತು ಹನೂರು ತಾಲೂಕು ಉಪ್ಪಾರ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ಪುಸ್ಕರಿಸುವ ಕಾರ್ಯ ಶ್ಲಾಘನೀಯ. ಕೊಳ್ಳೇಗಾಲ ಮತ್ತು ಹನೂರು ತಾಲೂಕು ಉಪ್ಪಾರ ಸರ್ಕಾರಿ ನೌಕರರ ಸಂಘ ಸ್ಥಾಪನೆ ಗೊಂಡಾಗಿನಿಂದಲೂ ಪ್ರತಿ ವರ್ಷ ಮಕ್ಕಳ ಪ್ರತಿಭೆ ಯನ್ನು ಪುರಸ್ಕರಿಸಲಾಗುತ್ತಿದೆ. ಸಮಾಜದ ಬೆಳವ ಣಿಗೆಗೆ ಶಿಕ್ಷಣ ಅಗತ್ಯವಿದೆ ಎಂಬುದನ್ನು ತಿಳಿದು ಈ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವುದು ಮಾದರಿಯಾಗಿದೆ ಎಂದರು. ಬೆಳವಣಿಗೆ ಹೊಂದಲು ಶಿಕ್ಷಣ ಮತ್ತು ಉದ್ಯೋಗ ಅತ್ಯಗತ್ಯವಾಗಿದೆ ಎಂಬುದನ್ನು ಮಕ್ಕಳು ತಿಳಿಯಬೇಕು ಎಂದರು.
ಇದೇ ಸಂದರ್ಭ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಪಡೆದ 51 ಮಕ್ಕಳಿಗೆ ಗೌರವಿಸಲಾಯಿತು. ಉಪ್ಪಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಿಯಶಂಕರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷ ಶಿವಕುಮಾರ,
ಜಿ.ಪಂ.ಮಾಜಿ ಉಪಾಧ್ಯಕ್ಷ ಯೋಗೇಶ್, ಸಂಘದ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಸೋಮಣ್ಣ, ತಾ.ಪಂ. ಮಾಜಿ ಸದಸ್ಯ ಮರಿಸ್ವಾಮಿ, ಉಪ್ಪಾರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾದೇಶ್ ಮತ್ತಿತರಿದ್ದರು.