ಹನೂರಿನಲ್ಲಿ ವೀರಶೈವ ಮಹಾಸಭಾದ ವತಿಯಿಂದ ಭೀಮಣ್ಣ ಖಂಡ್ರೆ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುರುಡೇಶ್ವರಸ್ವಾಮಿ, ಸೋಮಶೇಖರ್, ಜಗಧೀಶ್, ಕುಮಾರ್ ಇತರರಿದ್ದರು.  
ಚಾಮರಾಜನಗರ

ಬೀದರ್ ಜಿಲ್ಲೆ ಉಳಿಸಲು ಶ್ರಮಿಸಿದ್ದ ಖಂಡ್ರೆ

ಪ್ರಮುಖ ಮುಖ್ಯಾಂಶಗಳು

  • ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ
  • ಖಾಸಗಿ ಬಸ್ ನಿಲ್ದಾಣ
ಹನೂರು: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ಡಾ.ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ ಬಳಿ ಜಮಾಯಿಸಿದ ವಿವಿಧ ಸಮುದಾಯದ ಮುಖಂಡರು ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿ ಸಂತಾಪ ಸೂಚಿಸಿದರು.
ಮಹಾಸಭಾದ ತಾಲೂಕು ಅಧ್ಯಕ್ಷ ಒಡೆಯರಪಾಳ್ಯ ಸೋಮಶೇಖರ್ ಮಾತನಾಡಿ, ಭೀಮಣ್ಣ ಖಂಡ್ರೆ ಅವರು 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದರು. ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಲು ಶ್ರಮಿಸಿದ್ದರು. ಇವರ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದರು. ಹಾಗಾಗಿ ಇವರ ನಿಧನ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು.
ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರಸ್ವಾಮಿ, ನಿರ್ದೇಶಕ ಜಗದೀಶ್, ಮಹಾಸಭಾದ ತಾಲೂಕು ಪ್ರಧಾನ ಕಾರ್ಯದರ್ಶಿ ಮಂಗಲ ಕುಮಾರ್, ಮುಖಂಡರಾದ ಶಾಂತರಾಜು ನಾಗೇಂದ್ರ, ಪ್ರಭು, ಜಡೇಸ್ವಾಮಿ, ಬಾಬು ಇತರರು ಇದ್ದರು.