ಕೊಳ್ಳೇಗಾಲ ತಾಲೂಕಿನ ತಾಲೂಕಿನ ನರೀಪುರ-ಸರಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಅಪಘಾತ ಸಂಭವಿಸಿ ಕಾರು ಪಲ್ಟಿ ಆಗಿರುವುದು.
ಕೊಳ್ಳೇಗಾಲ: ತಾಲೂಕಿನ ನರೀಪುರ-ಸರಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ತಾಲೂಕಿನ ಬಸವನಗುಡಿ ಗ್ರಾಮದ ಉದಯರಾಜ್ ಹಾಗೂ ಸಂತೋಷ್ ಗಾಯಗೊಂಡವರು. ಹನೂರಿನ ಹೊಸಪಾಳ್ಯದಿಂದ ಕಾರಿನಲ್ಲಿ ಉದಯರಾಜ್ ಮತ್ತು ಸಂತೋಷ್ ಸೇರಿದಂತೆ ಐವರು ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಎದುರು ಬಂದ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಒಂದು ಕಾರು ರಸ್ತೆಯಲ್ಲಿ ಪಲ್ಟಿಯಾಗಿ ನಿಂತಿದೆ. ಅರದಲ್ಲಿದ್ದ ಐವರ ಪೈಕಿ ಇಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರೀಶಿಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತವಾದ ಎರಡೂ ಕಾರನ್ನು ಜಪ್ತಿ ಮಾಡಲಾಗಿದೆ.