ಅಸ್ತೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಗಾಯಗೊಂಡಿರುವ ಹಸು.
- ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು ಮೇಲೆ ದಾಳಿ
ಹನೂರು: ತಾಲೂಕಿನ ಕಾಡಂಚಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿಗೆ ಹಸು ಗಾಯಗೊಂಡಿದೆ.
ಗ್ರಾಮದ ಮಹದೇವಪ್ರಸಾದ್ ಎಂಬುವರು ಕೊಟ್ಟಿಗೆಯಲ್ಲಿ ಹಸು ಕಟ್ಟಿ ಹಾಕಿದ್ದರು. ರಾತ್ರಿ ಸಮೀಪದ ಅರಣ್ಯ ಪ್ರದೇಶದಿಂದ ಆಗಮಿಸಿದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿದೆ. ಚೀರಾಟದ ಶಬ್ಧ ಕೇಳಿ ಮನೆಯಿಂದ ಹೊರಬಂದ ಮಹದೇವಪ್ರಸಾದ್ ಕೂಗಾಟಕ್ಕೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಸ್ಥಳಕ್ಕೆ ತೆರಳಿ ನೋಡಿದಾಗ ಹಸು ಗಾಯಗೊಂಡಿದ್ದು, ಪಶುಪಾಲನಾ ಇಲಾಖೆಯ ವೈದ್ಯರು ಸ್ಥಳಕ್ಕೆ ಆಗಮಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾರೆ.