leapoard 
ಚಾಮರಾಜನಗರ

ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ

ಎಂ.ರವಿ
ಹನೂರು: ನಾಗಮಲೆಗೆ ತೆರಳುತ್ತಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಕಾರ್ಯ 5ನೇ ದಿನವಾದ ಗುರುವಾರವೂ ಮುಂದುವರಿದಿದ್ದು, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.
ದುರಂತ ನಡೆದ ಮೇ 10ರಂದೇ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ 45ಕ್ಕೂ ಹೆಚ್ಚು ಸಿಬ್ಬಂದಿ ಒಳಗೊಂಡ ತಂಡ ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದರು. ಕ್ಯಾಮರಾ ಟ್ರಾೃಪ್‌ನಲ್ಲಿ ಓಡಾಡುವ ದೃಶ್ಯ ಸೆರೆಯಾದರೂ ಚಾಲಾಕಿ ಚಿರತೆ ಇರಿಸಲಾಗಿರುವ ಬೋನಿ ಗೆ ಬಿದ್ದಿಲ್ಲ. ಬುಧವಾರ ತುಮಕೂರು ಕೇಜ್ ಅಳವಡಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾತ್ರಿ ವೇಳೆ ನಿಗಾ ವಹಿಸಿದ್ದರೂ ಚಿರತೆ ಸುಳಿವು ಪತ್ತೆಯಾಗಿಲ್ಲ. ಇದರಿಂದ ಚಿರತೆ ಕಾರ್ಯಾಚರಣೆ ಮುಂದುವರಿದಿದ್ದು, ವಿವಿಧ ಆಯಾಮಗಳಲ್ಲಿ ಪ್ರಯತ್ನ ನಡೆಯುತ್ತಿದೆ.