ಹನೂರು ತಾಲೂಕು ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಬಿಇಒ ಮಹೇಶ್ ಉದ್ಘಾಟಿಸಿದರು. ಅಶೋಕ್, ಚಿನ್ನಪ್ಪಯ್ಯ ಇತರರು ಇದ್ದರು.  
ಚಾಮರಾಜನಗರ

ವಿದ್ಯಾರ್ಥಿಗಳು ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಲಿ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸಲಹೆ
  • ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ
ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂಶೋಧಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದರ ಮೂಲಕ ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿ ಸಾಧನೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸಲಹೆ ನೀಡಿದರು.
ಶೈಕ್ಷಣಿಕ ವಲಯದ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ವಸ್ತುನಿಷ್ಠತೆಯನ್ನು ಹೊಂದಿದ್ದು, ಪ್ರಾಯೋಗಿಕವಾಗಿ ನಿಖರ ಫಲಿತಾಂಶ ತಿಳಿಸುತ್ತದೆ. ಮೂಢನಂಬಿಕೆಯನ್ನು ಹೋಗಲಾಡಿಸುತ್ತದೆ. ಆತ್ಮವಿಶ್ವಾಸವನ್ನು ಮೂಡಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು. ಇದರಿಂದ ಚಿಂತನಾ ಸಾಮರ್ಥ್ಯ ವೃದ್ಧಿಸುವುದರ ಜತೆಗೆ ಪ್ರಶ್ನಿಸುವ, ಆವಿಷ್ಕಾರ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಅಲ್ಲದೆ ಸಂಶೋಧನೆಗೆ ದಾರಿ ಮಾಡಿಕೊಡುತ್ತದೆ. ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಬಳಿಕ ಆಯೋಜಿಸಿದ್ದ ವಿವಿಧ ಮಾದರಿ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳಿಂದ ಪ್ರಯೋಗಿಕವಾಗಿ ಮಾಹಿತಿ ಪಡೆದುಕೊಂಡರು. ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ ಇತರರು ಇದ್ದರು.