ಗುಂಡ್ಲುಪೇಟೆ: ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ತಾಲೂಕು ಮತ್ತು ಜಿಲ್ಲೆಯಿಂದ ಹೆಚ್ಚಿನ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಮನವಿ ಮಾಡಿದ್ದಾರೆ.
ಜಿಲ್ಲೆ ಹಾಗೂ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ವುಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪಾತ್ರ ದೊಡ್ಡದು. ಈ ಬಗ್ಗೆ ಅಭಿಮಾನ ಇಟ್ಟಿರುವ ಜನರು ಉತ್ಸವದಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿದ್ದಾರೆ. ತಾಲೂಕು ಮತ್ತು ಜಿಲ್ಲೆಯಿಂದ ಹೊರಡುವ ಅಭಿಮಾನಿಗಳಿಗೆ ಆಯಾ ತಾಲೂಕು ಕೇಂದ್ರಗಳಿಂದ ಹಾಗೂ ಪ್ರತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ತಲಾ ಎರಡು ಬಸ್ ವ್ಯವಸ್ಥೆ ಮಾಡಲಾಗಿದೆ. ಮಾ.8ರಂದು ರಾತ್ರಿ ಗುಂಡ್ಲುಪೇಟೆಯ ಸಿಎಂಎಸ್ ಕಲಾಮಂದಿರದಿಂದ ಅಭಿಮಾನಿಗಳು 20 ಬಸ್‌ಗಳಲ್ಲಿ ಕಾರ್ಯಕ್ರಮಕ್ಕೆ ಹೊರಡಲಿದ್ದಾರೆ. ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಸ್ವಂತ ವಾಹನಗಳಲ್ಲಿ ಹೊರಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಿಂದಲೂ ತಲಾ 10 ಬಸ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3 ಸಾವಿರ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾರ್ಗಮಧ್ಯದಲ್ಲಿ ಸಿಗುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಅಭಿಮಾನಿಗಳಿಗೆ ಅಲ್ಲಿಯೂ ಸ್ನಾನ ಹಾಗೂ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಯಡಿಯೂರಪ್ಪ ಅಭಿಮಾನಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.