ಹನೂರಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಮಾತನಾಡಿದರು. ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ನರೇಂದ್ರ ಇತರರಿದ್ದರು. 
ಚಾಮರಾಜನಗರ

ಮುಂಬರುವ ಚುನಾವಣೆಗೆ ಕೈ ಕಾರ್ಯಕರ್ತರು ಸಜ್ಜಾಗಲಿ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಡಿಸಿಎಂ ಜಿ.ಪರಮೇಶ್ವರ್ ಸಲಹೆ
  • ಹನೂರು ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ ಸ್ವೀಕಾರ
ಹನೂರು: ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿಧಾನಸಭೆ ಚುನಾವಣೆಗೆ ಇನ್ನು ಒಂದೂವರೆ ವರ್ಷವಷ್ಟೇ ಬಾಕಿ ಇದೆ. ಇದಕ್ಕೂ ಮುನ್ನ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆ ನಡೆಯಲಿದೆ. ಆದ್ದರಿಂದ ಕಾರ್ಯಕರ್ತರು ಪಕ್ಷವನ್ನು ಸಂಘಟಿಸುವ ಮೂಲಕ ಚುನಾವಣೆಗೆ ಸಜ್ಜಾಗಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇದೆ. ಕಷ್ಟದಲ್ಲಿರುವ ರೈತರಿಗೆ ಸರ್ಕಾರ ಯಾವ ರೀತಿ ಸಹಾಯ ಮಾಡಬಹುದು ಎಂಬುದನ್ನು ಸಂಪುಟದಲ್ಲಿ ತೀರ್ಮಾನಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟರಂಗಶೆಟ್ಟಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ, ಮಾಜಿ ಶಾಸಕರಾದ ಆರ್.ನರೇಂದ್ರ, ಕಳಲೆ ಕೇಶವಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಹನೂರು ಬ್ಲಾಕ್ ಅಧ್ಯಕ್ಷ ಮುಕುಂದವರ್ಮ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ, ಮುಖಂಡರಾದ ನಾಗೇಂದ್ರ, ಮಣಿ, ಮಹದೇವಸ್ವಾಮಿ, ಮಲ್ಲೇಶ್, ನಾಗೇಂದ್ರ, ರಾಜೇಶ್ ಇತರರು ಇದ್ದರು.