ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೊ.ಎ.ಆರ್.ಮದನಗೋಪಾಲ್ ಉದ್ಘಾಟಿಸಿದರು. ತುಳಸೀರಾಂ, ಶಿವವಪ್ರಸಾದ್ ಇದ್ದರು.
- ಪ್ರೊ. ಮದನಕುಮಾರ್ ಸಲಹೆ
- ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ
ಗುಂಡ್ಲುಪೇಟೆ: ಯುವಕರು ತಮ್ಮ ಶಕ್ತಿ ಸಾಮರ್ಥ್ಯದ ಬಗ್ಗೆ ಅರಿವು ಪಡೆಯಬೇಕಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಎ.ಆರ್. ಮದನಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ನೋಂದಾಯಿತ ನಿರಂತರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಶಕ್ತಿಯ ಕೊಡುಗೆ ದೇಶಕ್ಕೆ ಅಪಾರ ಹಾಗೂ ಉನ್ನತ ಗುರಿ ತಲುಪಲು ನಿರಂತರ ಪರಿಶ್ರಮ ಶ್ರದ್ಧೆ, ಜ್ಞಾನ, ಕೌಶಲ ಅಭಿವೃದ್ಧಿ ಅವಶ್ಯಕ ಎಂದರು.
ಕಾರ್ಯಕ್ರಮದ ಸಂಚಾಲಕ ಡಾ.ಎಸ್. ತುಳಸಿರಾಮ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಬೇರುಗಳಂತೆ ಗಟ್ಟಿಯಾಗಿ ಶಿಕ್ಷಣ ಸಂಸ್ಥೆಯೊಂದಿಗೆ ನಿಂತರೆ ಹೊಸ ಚಿಗುರುಗಳಂತಿರುವ ಈಗಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗುತ್ತದೆ ಎಂದರು. ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಸಹಾಯಕ ಪ್ರಾಧ್ಯಾಪಕ ಸುರೇಶ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಕಾರ್ಯಕ್ರಮಗಳನ್ನು ಸೂರ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣದ ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ಶಿವಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಾಪಕರ ಮಾರ್ಗದರ್ಶನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಸೂಚಿಸಿದರು. ಅಧ್ಯಾಪಕ ಕಾರ್ಯದರ್ಶಿ ಡಾ. ರಮೇಶ್, ಪ್ರಾಧ್ಯಾಪಕರಾದ ಅನ್ನಪೂರ್ಣ, ಲಕ್ಷ್ಮೀ , ಪವಿತ್ರಾ, ಮಹಾದೇವ ಪ್ರಸಾದ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿಜಯಲಕ್ಷ್ಮೀ, ಆರಕ್ಷಕ ಇಲಾಖೆಯ ಕೀರ್ತಿ, ರಿಹಾನೆ, ನಾಗೇಂದ್ರ, ರಘು, ಮನುಕುಮಾರ್, ಶ್ರೀನಿವಾಸ್ ಹಾಗೂ ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು.