ಗುಂಡ್ಲುಪೇಟೆ ಪಟ್ಟಣದ ಸ್ಮಾರ್ಟ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಶಶಿಧರ್ ಉದ್ಘಾಟಿಸಿದರು. ಸ್ನೇಹರಾಜ್, ಜಯಕುಮಾರ್, ಸಂತೋಶ್, ಶ್ರೀಕಾಂತ್ ಇದ್ದರು. 
ಚಾಮರಾಜನಗರ

ಮಾದಕ ವ್ಯಸನದಿಂದ ಯುವಜನತೆ ದೂರವಿರಲಿ

ಗುಂಡ್ಲುಪೇಟೆ: ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ಶಶಿಧರ್ ಹೇಳಿದರು.
ಪಟ್ಟಣದ ಸ್ಮಾರ್ಟ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಮಾದಕ ವಸ್ತು ದುಷ್ಪರಿಣಾಮಗಳ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆ ಹೆಚ್ಚಾಗುತ್ತಿವೆ. ದಾರಿ ತಪ್ಪಿದ ಯುವಕರು ಮುಂದೆ ಸಮಾಜಘಾತಕರಾಗುತ್ತಿದ್ದಾರೆ. ತಡೆಗಟ್ಟಲು ಸರ್ಕಾರ ಕಾನೂನು ರೂಪಿಸಿದೆ. ಈ ಬಗ್ಗೆ ಪೊಲೀಸ್ ಇಲಾಖೆ ದೊಡ್ಡಪ್ರಮಾಣದಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಸ್ನೇಹಾ ರಾಜ್, ಸರ್ಕಲ್ ಇನ್‌ಸ್ಪೆಕ್ಟರ್ ಜಯಕುಮಾರ್, ಶಾಲೆಯ ಉಪಾಧ್ಯಕ್ಷ ಶ್ರೀಕಾಂತ್, ಪ್ರಾಂಶುಪಾಲ ಸಂತೋಷ್ ಕುಮಾರ್, ನಾರಾಯಣಸ್ವಾಮಿ, ವಿದ್ಯಾರ್ಥಿಗಳು ಇದ್ದರು.