ಕೊಳ್ಳೇಗಾಲ ನಗರಸಭೆ ಕಚೇರಿಗೆ ಗುರುವಾರ ಚಾಮರಾಜನಗರ ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಅವರು ಭೇಟಿ ನೀಡಿ ಕಚೇರಿಯಲ್ಲಿ ನಡೆಯುತ್ತಿರುವ ಸಾರ್ವ ಜನಕರ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು.
ಕೊಳ್ಳೇಗಾಲ: ನಗರಸಭೆ ಕಚೇರಿಗೆ ಗುರುವಾರ ಚಾಮರಾಜನಗರ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಅವರು ಭೇಟಿ ಕಾರ್ಯ ವೈಖರಿ ಪರಿಶೀಲಿಸಿದರು.
ಗಜೇಂದ್ರ ಪ್ರಸಾದ್ ಮಾತನಾಡಿ, ಇ-ಸ್ವತ್ತು ವಿಳಂಬ, ಕಚೇರಿಯಲ್ಲಿ ಕೆಲಸದ ನಿಮಿತ್ತ ಬಂದ ಸಾರ್ವಜನಿಕರಿಗೆ ಅಧಿಕಾರಿಗಳು, ನೌಕರರು ಸಮಪರ್ಕವಾಗಿ ಲಭ್ಯವಾಗುತ್ತಿಲ್ಲ ಎಂದ ದೂರಿನ ಮೇಲೆ ಕೊಳ್ಳೇಗಾಲ ನಗರಸಭೆ ಕಚೇರಿಗೆ ಆಗಮಿಸಿ ಸಾರ್ವಜನಿಕರ ಕೆಲಸ ಕಾರ್ಯಗಳು ಹೇಗೆ ನಡೆಯತ್ತಿವೆ ಎಂಬ ಬಗ್ಗೆ ತನಿಖೆ ಆರಂಭಿಸಿದ್ದೇವೆ. ತನಿಖೆ ನಂತರ ಲೋಕಾಯುಕ್ತ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಚಾಮರಾಜನಗರ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್‌ಕುಮಾರ್, ಮೈಸೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಕೆ.ಎನ್.ಗಿರೀಶ್, ವಿಜಯಕುಮಾರ್ ಇದ್ದರು.