ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಡಾ.ಬಾಬು ಜಗಜೀವನ್‌ರಾಮ್ ಜನ್ಮದಿನಾಚರಣೆ ಆಚರಿಸಲಾಯಿತು. ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಸೈಯದ್‌ರಫಿ, ಬಿ.ಕೆ.ರವಿಕುಮಾರ್ ಇತರರಿದ್ದರು.
- ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಅಭಿಪ್ರಾಯ
- ಡಾ.ಬಾಬು ಜಗಜೀವನರಾಮ್ ಅವರ 119 ನೇ ಜನ್ಮದಿನಾಚರಣೆ
- ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆ
ಚಾಮರಾಜನಗರ: ದೇಶದಲ್ಲಿ ಸುಮಾರು 50 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಡಾ.ಬಾಬು ಜಗಜೀವನ್‌ರಾಮ್ ಅವರ ಸಾಧನೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬಾಬೂಜಿ ಅವರು ನೆಹರೂ ಸಂಪುಟದಲ್ಲಿ ಕೃಷಿಸಚಿವರಾಗಿದ್ದಾಗ ಕೃಷಿಗೆ ಹೆಚ್ಚುಒತ್ತು ನೀಡಿ, ಹಸಿರು ಕ್ರಾಂತಿ ಮಾಡಿ ದೇಶದ ಆಹಾರ ಕೊರತೆಯನ್ನು ನೀಗಿಸಿದರು. 50 ವರ್ಷಗಳ ಕಾಲಸುದೀರ್ಘ ಆಡಳಿತ ನಡೆಸಿದ ಶ್ರೇಷ್ಠ ರಾಜಕಾರಣಿಯಾಗಿದ್ದಾರೆ ಎಂದು ಬಣ್ಣಿಸಿದರು.
ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಬಾಬುಜಗಜೀವನ್ ರಾಂ ಅವರು ಕೃಷಿ, ಕಾರ್ಮಿಕ, ರಕ್ಷಣಾಖಾತೆ, ಸಂಪರ್ಕ ಸಚಿವರಾಗಿ ಹಾಗೂ ಉಪಪ್ರಧಾನಿಯಾಗಿ ದೇಶದ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಕೆಪಿಸಿಸಿ ಸದಸ್ಯ ಸೈಯದ್‌ರಫಿ, ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯದರ್ಶಿ ಎ.ಎಚ್.ನಸ್ರುಲ್‌ಖಾನ್, ಮುಖಂಡ ಆಯುಬ್ ಖಾನ್, ರಾಮಸಮುದ್ರ ಶಿವಮೂರ್ತಿ, ತಾ.ಪಂ ಮಾಜಿ ಸದಸ್ಯ ಪುಟ್ಟಸ್ವಾಮಿ, ಗ್ರಾ.ಪಂ ಮಾಜಿ ಸದಸ್ಯ ರಾಜಣ್ಣ, ಮಹೇಶ್ ಕರಿನಂಜನಪುರ, ಬಸವಣ್ಣ, ಡಾ.ಬಾಬು ಜಗಜೀವನರಾಮ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಚ್.ಎಚ್.ನಾಗರಾಜು, ಪ್ರಧಾನ ಕಾರ್ಯದರ್ಶಿ ಸುಂದರ್ ಹಾಗೂ ಇತರರು ಹಾಜರಿದ್ದರು.