ಮಧುವನಹಳ್ಳಿ ಎಸ್.ಶಿವಕುಮಾರ್  
ಚಾಮರಾಜನಗರ

ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿ

ಎ. ಆರ್. ರಘುರಾಮ
ಕೊಳ್ಳೇಗಾಲ : ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಉಪ್ಪಾರ ಸಮುದಾಯದ ಹಿರಿಯ ಮುಖಂಡ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಎಸ್.ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಪುಟ್ಟರಂಗ ಶೆಟ್ಟಿ ಅವರು ರಾಜ್ಯದಲ್ಲಿ ಉಪ್ಪಾರ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. ರಾಜ್ಯದಲ್ಲಿ
ಸುಮಾರು 50 ಲಕ್ಷಕ್ಕೂ ಹೆಚ್ಚು ಉಪ್ಪಾರ ಸಮುದಾಯದವರು ಇದ್ದಾರೆ. ಆದ್ದರಿಂದ ಪುಟ್ಟರಂಗಶೆಟ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಜನಾಂಗದವರಲ್ಲಿ ಕೇಳಿ ಬರುತ್ತಿದೆ ಎಂದು ಅವರು
ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಪುಟ್ಟರಂಗಶೆಟ್ಟಿ ಸತತ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಹಿಂದೆಯೂ ಅತ್ಯಲ್ಪ ಅವಧಿಗೆ ಸಚಿವರಾಗಿದ್ದರು. ಆದ ಕಾರಣ ಈ ಬಾರಿ ಸಂಪುಟ ವಿಸ್ತರಣೆ ಸಂದರ್ಭ ಅವರಿಗೆ ಸಚಿವ ಸ್ಥಾನ ನೀಡ ಬೇಕು ಹಾಗೂ ಚಾಮರಾಜ ನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲಿಸಬೇಕು ಎಂದು ಒತ್ತಾಯಿಸಿದ್ದಾರೆ.