ಗುಂಡ್ಲುಪೇಟೆ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 
ಚಾಮರಾಜನಗರ

ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಲೋಕೇಶ್ ಮನು. ಡಿ
ಗುಂಡ್ಲುಪೇಟೆ: ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಮರು ಗುರುವಾರ ಪಟ್ಟಣದ ಈದ್ಗಾ ಮೈದಾನದಲ್ಲಿ ಶ್ರದ್ಧಾಭಕ್ತಿಗಳಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆ 10 ಗಂಟೆಗೆ ಈದ್ಗಾ ಮೈದಾನದಲ್ಲಿ ಸಮಾವೇಶಗೊಂಡ ಶ್ವೇತ ವಸ್ತ್ರ ಧರಿಸಿದ ಮಕ್ಕಳು, ಯುವಕರು ಹಾಗೂ ಹಿರಿಯರು ಪರಸ್ಪರ ಆಲಂಗಿಸಿ ಶುಭಾಶಯ ಕೋರಿದರು. ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ಮುಖಂಡರು, ಜಾಮೀಯಾ ಮಸೀದಿ ಪದಾಧಿಕಾರಿಗಳು ಇತರರಿದ್ದರು.