ಅವಂದೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್ ಇತರರು ಇದ್ದರು.  
ಚಾಮರಾಜನಗರ

ಬ್ರಹ್ಮ ಕಲಶೋತ್ಸವ ಪೂರ್ವ ಸಿದ್ಧತಾ ಸಭೆ

ಎ. ಆರ್. ರಘುರಾಮ
ನಾಪೋಕ್ಲು : ಏಳುನೂರು ವರ್ಷಗಳ ಇತಿಹಾಸ ಹೊಂದಿರುವ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮೇ 5ರಿಂದ 8 ರವರೆಗೆ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ವಿಗ್ರಹ ಮರು ಪ್ರತಿಷ್ಠಾಪನೆ, ಅಷ್ಟಬಂಧ, ಬ್ರಹ್ಮ ಕಲಶೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮವನ್ನು ಯಶಗೊಳಿಸುವ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಪ್ರಧಾನ ಅರ್ಚಕರಾದ ದಿನೇಶ್ ಭಟ್ ಮಾತನಾಡಿದರು.
ಮೇ 5 ರಿಂದ 8ರವರೆಗೆ ನಡೆಯಲಿರುವ ಉತ್ಸವವನ್ನು ಯಶಸ್ವಿಗೊಳಿಸಲು ಸಲಹೆ, ಸೂಚನೆ ನೀಡಿದರು.
ಗ್ರಾಮದ ತಕ್ಕ ಮುಖ್ಯಸ್ಥರು, ಗ್ರಾಮದ ಕಾರ್ಯದರ್ಶಿ ಕಾಳೇರಮ್ಮನ ಪೂವಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಊರೊಳನ ತೇಜಕುಮಾರ್, ಗ್ರಾಮದ ಪ್ರಮುಖರಾದ ದೇವಾಯಿರ ದೇವಯ್ಯ, ದಾಮೋದರ, ಚಂದ್ರಶೇಖರ್, ಹೊಸೂರು ಗಿರೀಶ್, ಬೆಳ್ಯನ ವಾಸುದೇವ, ಬೆಳ್ಯನ ನಾಣಯ್ಯ, ಪವಿತ್ರಾ, ಪಟ್ಟಡ ನಂದಕುಮಾರ್ ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.