ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಸೋಮವಾರ ಶಾಸಕ ಎ.ಆರ್. ಕೃಷ್ಣ ಮೂರ್ತಿ ಅವರು ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳ ಜತೆಗೂಡಿ ಕೇಕ್ ಕತ್ತರಿಸುವ ಮೂಲಕ ಜನ್ಮ ದಿನ ಆಚರಿಸಿಕೊಂಡರು.
ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಸೋಮವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ರವರ 65ನೇ ವರ್ಷದ ಜನ್ಮ ದಿನವನ್ನು ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸಿದರು.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆಗೂಡಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಎ.ಆರ್.ಕೃಷ್ಣಮೂರ್ತಿ ಅವರು ಮಾಲಾರ್ಪಣೆ ಮಾಡಿದರು. ಬಳಿಕ ನಗರಸಭೆ ಮಾಜಿ ಅಧ್ಯಕ್ಷರಾದ ರೇಖಾ, ರಮೇಶ್ ಮತ್ತು ಮುಖಂಡರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದರು. ಈ ವೇಳೆ ಕೊಳ್ಳೇಗಾಲ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಪಕ್ಷದ ಮುಖಂಡರು ಹಾಗೂ ಅಭಿಮಾನಿಗಳು ಹಾರ, ಶಾಲು ಹಾಕಿ ಶುಭಾಶಯ ತಿಳಿಸಿದರು.
ಹುಟ್ಟು ಹಬ್ಬದ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ರಮೇಶ್ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಿದರು. ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಬಗ್ಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ನನ್ನ 65ನೇ ವರ್ಷದ ಹುಟ್ಟು ಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಆರೋಗ್ಯ, ಆಯುಷ್ಯ ಹಾಗೂ ಜನ ಸೇವೆಗೆ ಹೆಚ್ಚಿನ ಅಧಿಕಾರ ಸಿಗಲಿ ಎಂದು ಹೃದಯಪೂರ್ವಕವಾಗಿ ಅರಸುತ್ತಿದ್ದಾರೆ. ಕ್ಷೇತ್ರದ ಜನರ ಸೇವೆ ಮಾಡುವ ಮೂಲಕ ಅವರ ಪ್ರೀತಿ, ಅಭಿಮಾನವನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಬಳಿ ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ಶಾಂತರಾಜು ಬಸ್ತೀಪುರ, ಪ್ರಕಾಶ್ ಶಂಕನಪುರ, ರಾಘವೇಂದ್ರ, ಧರಣೇಶ್, ಸುಮಾ ಸುಬ್ಬಣ್ಣ, ಮುಖಂಡ ಓಲೆ ಮಹದೇವ, ಡಾ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಎಸ್.ಆನಂದಮೂರ್ತಿ, ಕಾರ್ಯ ದರ್ಶಿ ಪಾಪಣ್ಣ, ದಿಲೀಪ್, ಭೀಮನಗರ ಯಜಮಾನರು, ವಿವಿಧ ಗ್ರಾಮಗಳ ಮುಖಂಡರು ಹಾಗೂ ಅಭಿಮಾನಿಗಳು ಇದ್ದರು.