ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿನಂದಿಸಿದರು. ಮಂಜುಳಾ, ಜೋಸೆಫ್ ಅಲೆಕ್ಸಾಂಡರ್, ಚಿಕ್ಕರಾಜು ಇತರರಿದ್ದರು.  
ಚಾಮರಾಜನಗರ

ಸಾಧಕ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ

ಅಭಿನಯ್ ಎಚ್.ಎಂ
ಕೊಳ್ಳೇಗಾಲ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್‌ಗಳಾಗಿ ಹೊರ ಹೊಮ್ಮಿದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಸನ್ಮಾನಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗದಲ್ಲಿ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ರಿಷಿತಾ(623), ಸಿಂಚನಾ(620), ತನ್ಮಯಿ(618) ಸರ್ಕಾರಿ ಮುಡಿಗುಂಡ ಶ್ರೀ ಆದರ್ಶ ಶಾಲೆಯ ನಿಹಾರಿಕಾ (620) ಹಾಗೂ ತಿಮ್ಮರಾಜೀಪುರ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ದೀಪಿಕಾ (619) ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮಂಜುಳಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ಪ್ರಾಥಮಿಕ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್, ಸದಸ್ಯ ಬಸವರಾಜು, ಇಸಿಒ ವಿಜಯಕುಮಾರ್, ನಾಗರಾಜು, ಆದರ್ಶ ಶಾಲೆಯ ಮುಖ್ಯ ಶಿಕ್ಷಕಿ ಪ್ರಿಯದರ್ಶಿನಿ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ಮಹೇಶ್ ಮತ್ತಿತರಿದ್ದರು.