ಆರಾಧನಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಮಸಣಾಪುರ ಗ್ರಾಮದ ಎಂ. ಶಿವನಂಜಯ್ಯ ಅವರು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರನ್ನು ಇತ್ತೀಚೆಗೆ ಗೌರವಿಸಿದರು. ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ರೂಪೇಶ್ ಇತರರು ಇದ್ದರು.
ಯಳಂದೂರು : ಸಾರ್ವಜನಿಕ ಸೇವೆಯನ್ನು ಮಾಡಲು ಬದ್ಧನಾಗಿದ್ದೇನೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿ ನಾಮನಿರ್ದೇಶಿತ ಸದಸ್ಯ ಮಸಣಾಪುರ ಶಿವನಂಜಯ್ಯ ಹೇಳಿದರು.
ನೇಮಕಾತಿಗೆ ಸಹಕರಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರನ್ನು ಗೌರವಿಸಿ ಅವರು ಮಾತನಾಡಿದರು.
ನನ್ನ ಮೇಲೆ ನಂಬಿಕೆ ಇಟ್ಟು ಶಾಸಕರು ಆರಾಧನಾ ಸಮಿತಿ ಸದಸ್ಯ ಸ್ಥಾನ ನೀಡಿದ್ದಾರೆ. ಈ ಮೂಲಕ ಜನ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಿದ್ದಾರೆ. ಇದಕ್ಕಾಗಿ ಧನ್ಯತೆ ಸಮರ್ಪಿಸುವೆ ಎಂದರು.
ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಹಲವಾರು ಸಾರ್ವಜನಿಕ ಸೇವೆಗಳು ನಡೆಯುತ್ತಿವೆ. ನೂರಾರು ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಪರ್ವ
ಮಾಡುವಲ್ಲಿ ಶಾಸಕರ ಯತ್ನ ಶ್ಲಾಘನೀಯ ಎಂದರು. ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರೂಪೇಶ್ ಸೇರಿದಂತೆ ಇತರರು ಇದ್ದರು.