ಹನೂರು ತಾಲೂಕಿನ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಿರುವ ತುರ್ತು ವಾಹನ ಸೇವೆಗೆ ಶಾಸಕ ಎಂ.ಆರ್ ಮಂಜುನಾಥ್ ಸೋಮವಾರ ಚಾಲನೆ ನೀಡಿದರು. ಕೆ.ಎನ್.ಚೈತ್ರಾ, ಉಮೇಶ್, ಡಾ.ಪ್ರಕಾಶ್, ಡಾ. ಮನು ಇತರರಿದ್ದರು.  
ಚಾಮರಾಜನಗರ

ತುರ್ತು ವಾಹನ ಸೇವೆಗೆ ಶಾಸಕ ಚಾಲನೆ

ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಸೋಮವಾರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ತಾಲೂಕಿನ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿರುವ ತುರ್ತು ವಾಹನ ಸೇವೆಗೆ ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಹನೂರು ಭಾಗವು ಭೌಗೋಳಿಕವಾಗಿ ವಿರ್ಸ್ತಿಣವಾಗಿದ್ದು, ಕೆಲವು ಕಡೆಗಳಲ್ಲಿ ಜನರು ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕಾದರೆ ವಾಹನದ ಸೌಕರ್ಯದ ಸಮಸ್ಯೆ ಎದುರಿಸುತ್ತಿದ್ದರು. ಇದನ್ನು ಮನಗಂಡು ರಾಮಾಪುರ ಆಸ್ಪತ್ರೆಗೆ ತುರ್ತು ವಾಹನವನ್ನು ನೀಡಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ತುರ್ತು ವೇಳೆ ಜನರು ಆಸ್ಪತ್ರೆಗೆ ತೆರಳಲು ಸಹಕಾರಿಯಾಗಲಿದೆ. ಆದ್ದರಿಂದ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಅಗತ್ಯವಿರುವ ಆಸ್ಪತ್ರೆಗೂ ವಾಹನ ಸೌಕರ್ಯದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ತಾಲೂಕು ಆರೋಗ್ಯಾಧಿಕಾರಿ ಉಮೇಶ್, ವೈದ್ಯ ಡಾ. ಮನು ಹಾಗೂ ಇನ್ನಿತರರು ಇದ್ದರು.