ವೀರ ವನಿತೆ ಒನಕೆ ಓಬವ್ವಳ ಜಯಂತಿ ಅಂಗವಾಗಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ನಗರದ ಸ್ವಾತಂತ್ರೃ ಉದ್ಯಾನದಲ್ಲಿ ಗಣ್ಯರು ಗಿಡ ನೆಟ್ಟರು. ರೇಣುಕಾ ರಾಜ್, ಪ್ರಮಿಳಾ ಭರತ್, ಜಗದೀಶ್, ನಜರ್‌ಬಾದ್ ನಟರಾಜ್, ವಿನಯ್‌ಕುಮಾರ್, ಕಡಕೋಳ ಜಗದೀಶ್, ಶ್ರುತಿ, ಅಪೂರ್ವ ಸುರೇಶ್, ಎಸ್.ಎನ್.ರಾಜೇಶ್, ಚರಣ್, ದಿನೇಶ್, ಸದಾಶಿವ ಇತರರಿದ್ದರು.  
ಚಾಮರಾಜನಗರ

ಒನಕೆ ಓಬವ್ವನ ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ

ಎಂ.ರವಿ
ಮೈಸೂರು: ವೀರ ವನಿತೆ ಒನಕೆ ಓಬವ್ವಳ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್ ತಿಳಿಸಿದರು.
ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ವೀರ ವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉದ್ಯಾನದಲ್ಲಿ ಗಿಡ ನೆಟ್ಟು ಮಾತನಾಡಿದರು. 
ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ತನ್ನ ಮನೆಯಲ್ಲಿ ಆಹಾರ ಸಂಸ್ಕೃರಣೆಗೆ ಬಳಸುವಂತಹ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚಂಡಾಡಿ, ಕೋಟೆಯನ್ನು ರಕ್ಷಿಸಿದ ಮಹಾಮಾತೆ ಓಬವ್ವ. ಇಂತಹವರ ಚರಿತ್ರೆಗಳು ನಾಡಿನಾಚೆಗೂ ಪಸರಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.
ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್ ಮಾತನಾಡಿ, ವೀರ ವನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು. ಕೋಟೆ ಕಾವಲುಗಾರನ ಮಡದಿಯಾಗಿ, ಕೋಟೆಗೆ ಆಪತ್ತು ಎದುರಾದಾಗ, ಸಮಯ ಪ್ರಜ್ಞೆಯಿಂದ ವೈರಿಗಳನ್ನು ಸದೆ ಬಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು ಎಂದರು. 
ಬಿಜೆಪಿ ಮುಖಂಡ ಜಗದೀಶ್, ಕೆಪಿಸಿಸಿ ಸದಸ್ಯರಾದ  ನಜರ್‌ಬಾದ್ ನಟರಾಜ್,  ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ವಿಕ್ರಂ ಅಯ್ಯಂಗಾರ್, ಶ್ರುತಿ,  ಅಪೂರ್ವ ಸುರೇಶ್, ಎಸ್.ಎನ್.ರಾಜೇಶ್,  ಚರಣ್, ದಿನೇಶ್,  ಸದಾಶಿವ್, ಸುಚೇಂದ್ರ ಹಾಗೂ ಇನ್ನಿತರರು ಹಾಜರಿದ್ದರು.