ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ವಿದ್ಯುತ್ ಪ್ರಸರಣಾ ಕೇಂದ್ರ ನಿರ್ಮಾಣಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಗಂಗಾಧರಸ್ವಾಮೀಜಿ, ಎಚ್.ಎಸ್.ನಂಜುಂಡಪ್ರಸಾದ್, ರಾಜಶೇಖರ್, ಜಿ.ಕೆ.ಲೋಕೇಶ್ ಇದ್ದರು. 
ಚಾಮರಾಜನಗರ

ಜನರಿಗೆ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ

ಗುಂಡ್ಲುಪೇಟೆ: ಜನರಿಗೆ ಅಗತ್ಯವಾಗಿ ಬೇಕಾಗಿರುವ ವಸತಿ, ಕುಡಿಯುವ ನೀರು ಹಾಗೂ ವಿದ್ಯುತ್ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ 16 ಲಕ್ಷ ರೂ.ವೆಚ್ಚದಲ್ಲಿ ವಿದ್ಯುತ್ ಪ್ರಸರಣಾ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಗ್ರಾಮಾಂತರ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಮಾಡುವ ಸಲುವಾಗಿ ಹೊಸದಾಗಿ ಮೂರು ವಿದ್ಯುತ್ ಪ್ರಸರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಬಂಡೀಪುರ ಕಾಡಂಚಿನ ಗೋಪಾಲಪುರದ ಪ್ರಸರಣಾ ಕೇಂದ್ರದಿಂದ ಸುತ್ತಮುತ್ತಲಿನ 16 ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ನೆರವಾಗಲಿದೆ ಎಂದು ಹೇಳಿದರು.
ಗೋಪಾಲಪುರ ಕಬ್ಬಿಣಕೋಲೇಶ್ವರ ಮಠದ ಗಂಗಾಧರ ಸ್ವಾಮೀಜಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಭೂನ್ಯಾಯಮಂಡಲಿಯ ಸದಸ್ಯ ಜಿ.ಕೆ. ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಮಡಿವಾಳಪ್ಪ ಸೇರಿದಂತೆ ಹಲವರು ಇದ್ದರು.