ಗುಂಡ್ಲುಪೇಟೆ ತಾಲೂಕು ಕಚೇರಿ ಎದುರು ಸವಿತಾ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು. 
ಚಾಮರಾಜನಗರ

ಸವಿತಾ ಸಮಾಜದ ಮುಖಂಡರ ಪ್ರತಿಭಟನೆ

ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿಗೆ ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಸಮಾಜದ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಮಾರಂಭ ನಿಗದಿಗೊಳಿಸಲಾಗಿತ್ತು. ತಾಲೂಕಿನ ಬಹುತೇಕ ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆ ಕಾರ್ಯಕ್ರಮದಿಂದ ಹೊರ ನಡೆದು ತಾಲೂಕು ಕಚೇರಿ ಮುಂಭಾಗ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಸವಿತಾ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ಪರಶಿವಮೂರ್ತಿ ಮಾತನಾಡಿ, ಸವಿತಾ ಮಹರ್ಷಿ ಜಯಂತಿಗೆ ತಾಪಂ ಇಒ ಹೊರತುಪಡಿಸಿ ಎಲ್ಲ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ. ಈ ಮೂಲಕ ಸಮಾಜವನ್ನು ಕಡೆಗಣಿಸಲಾಗಿದೆ. ಅಧಿಕಾರಿಗಳು ಸವಿತಾ ಸಮಾಜದವರ ಮೇಲೆ ತಾತ್ಸಾರ ಮನೋಭಾವನೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮಹರ್ಷಿ ಜಯಂತಿಗೆ ಗೈರಾಗಿ ಅಗೌರವ ತೋರಿರುವುದು ಖಂಡನೀಯ. ಶೀಘ್ರದಲ್ಲೇ ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.
ಸವಿತಾ ಸಮಾಜದ ತಾಲೂಕು ಅಧ್ಯಕ್ಷ ವಿಠಲ್, ಉಪಾಧ್ಯಕ್ಷ ರಾಜು, ಹಂಗಳ ಹೋಬಳಿ ಅಧ್ಯಕ್ಷ ಸಿದ್ದಪ್ಪ, ತೆರಕಣಾಂಬಿ ಹೋಬಳಿ ಅಧ್ಯಕ್ಷ ಅಂಕಪ್ಪ, ಬೇಗೂರು ಹೋಬಳಿ ಅಧ್ಯಕ್ಷ ಸುರೇಶ್, ಕಸಬಾ ಹೋಬಳಿ ಅಧ್ಯಕ್ಷ ಮಹದೇವಶೆಟ್ಟಿ, ಮುಖಂಡರಾದ ರಾಜಣ್ಣ, ರವಿ, ಮಹದೇವಶೆಟ್ಟಿ, ಕೃಷ್ಣಪ್ಪ, ಗಣೇಶ್, ಸುರೇಶ್, ರಾಚ ಇದ್ದರು.