ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಎಐಡಿಎಸ್‌ಒ ಸಂಘಟನೆಯ ಸದಸ್ಯರು ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆಸಿಯಾ ಬೇಗಂ, ಚಂದ್ರಕಲಾ, ಹೇಮಲತಾ, ಎಚ್.ಎಂ.ಬಸವರಾಜು,ಟಿ.ಆರ್.ಸುನೀಲ್, ಯು.ಕೆ.ಚಂದನ ಮತ್ತು ಇತರರು ಹಾಜರಿದ್ದರು. 
ಚಾಮರಾಜನಗರ

ಕೆಪಿಎಸ್ ಮ್ಯಾಗ್ನೆಟ್ ಶಾಲೆ ಸ್ಥಾಪನೆಗೆ ವಿರೋಧ

ಪ್ರಮುಖ ಮುಖ್ಯಾಂಶಗಳು

  • ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನಾ ಸಮಾವೇಶ
  • ಯೋಜನೆ ರದ್ದು ಪಡಿಸಲು ಆಗ್ರಹ
ಚಾಮರಾಜನಗರ: ಅಮೆರಿಕಾ ದೇಶದಲ್ಲಿ ಮೊದಲ ಬಾರಿಗೆ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯಲಾಯಿತು. ನಂತರ ಅಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋದವು. ಈಗ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಈ ವಿಧಾನವನ್ನು ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಐಡಿಎಸ್‌ಒ ಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಸಿ.ಎಂ.ಅಪೂರ್ವ ಹೇಳಿದರು.
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ರದ್ದುಗೊಳಿಸಬೇಕೆಂದು ಒತ್ತಾಯಿಸಿ ನಗರದ ರೋಟರಿ ಭವನದಲ್ಲಿ ಎಐಡಿಎಸ್‌ಒ ಸಂಘಟನೆಯಿಂದ ಭಾನುವಾರ ಆಯೊಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ವಿದೇಶಿ ಬ್ಯಾಂಕ್‌ಗಳು ಶಿಕ್ಷಣಕ್ಕಾಗಿ ನೀಡುತ್ತಿರುವ ಸಾಲದ ಹಿಂದೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಮಧ್ಯಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದರೂ ಕೆಪಿಎಸ್ ಮ್ಯಾಗ್ನೆಟ್ ಮಾದರಿಯಲ್ಲಿ ಶಾಲೆಗಳನ್ನು ತೆರೆಯಲು ಪ್ರಯತ್ನ ನಡೆಸುತ್ತಿವೆ. ಇದರಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯೇ ಹಾಳಾಗುತ್ತದೆ ಎಂದು ದೂರಿದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 61 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 7 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶೌಚಗೃಹಗಳಿಲ್ಲ. 21 ಸಾವಿರ ಸರ್ಕಾರಿ ಶಾಲೆಗಳ ಕಟ್ಟಡ ಬೀಳುವ ಸ್ಥಿತಿಯಲ್ಲಿವೆ. ಈ ಕಾರಣಕ್ಕಾಗಿ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ. ಶಾಲೆಗಳಿಗೆ ಸೌಕರ್ಯ ಒದಗಿಸಿಕೊಡದ ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಿ ಬಜೆಟ್‌ನಲ್ಲಿ ಅನುದಾನ ಇಟ್ಟಿರುವುದಾಗಿ ೋಷಿಸಿದೆ. ಇದನ್ನು ವಿರೋಧ ಪಕ್ಷಗಳೂ ವಿರೋಧಿಸಲಿಲ್ಲ. ಎಲ್ಲರೂ ಒಂದೇ ವರ್ಗ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಧಾರವಾಡದಲ್ಲಿ ನಿರುದ್ಯೋಗಿಗಳು ನೌಕರಿಗಾಗಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಿದರು. ಸರ್ಕಾರದ ನೀತಿಗಳು ಜನಪರವಾಗಿವೆಯೇ ಎಂದು ಅರ್ಥ ಮಾಡಿಕೊಳ್ಳಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ರದ್ದು ಪಡಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪಾಲಕರು ಹೋರಾಟಕ್ಕಿಳಿಯಬೇಕೆಂದು ಕರೆ ಕೊಟ್ಟರು.
ಹಿರಿಯ ಹೋರಾಟಗಾರ ಕೆ.ವೆಂಕಟರಾಜು ಮಾತನಾಡಿ, ಸಂವಿಧಾನ ಬದ್ಧವಾಗಿ ಉಚಿತವಾಗಿ ಸಿಗಬೇಕಾದ ಶಿಕ್ಷಣವನ್ನು ಕಸಿಯುವ ಹುನ್ನಾರ ನಡೆಯುತ್ತಿದೆ. ಶಿಕ್ಷಣವೇ ಮಕ್ಕಳಿಗೆ ಆಸ್ತಿಯಾಗಿದ್ದು, ಆಸ್ತಿಯನ್ನು ಖಾಸಗಿಯವರ ಕೈಗೆ ಕೊಡುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಯಲ್ಲಿ ಕೌಶಲ್ಯ ತರಬೇತಿ ಕೊಡುವುದಾಗಿ ಹೇಳಾಗುತ್ತಿದೆ. ಐಟಿಐ, ಪಾಲಿಟೆಕ್ನಿಕ್‌ಗಳಂತ ಕೌಶಲ್ಯ ತರಬೇತಿ ಕೋರ್ಸ್‌ಗಳು ಮುಚ್ಚಿ ಹೋಗುತ್ತಿವೆ. ನಮ್ಮ ಪೂರ್ವಜನರು ಗ್ರಾಮಕ್ಕೊಂದು ಸರ್ಕಾರಿ ಶಾಲೆ ತೆರೆದು ಊರಲ್ಲಿ ಮಕ್ಕಳ ಶಿಕ್ಷಣಕ್ಕೆ ಸೌಕರ್ಯ ಒದಗಿಸಿಕೊಡುತ್ತಿದ್ದರು. ಜಿಲ್ಲೆಯಲ್ಲಿ ಶತಮಾನ ಕಂಡ ಹಲವು ಸರ್ಕಾರಿ ಶಾಲೆಗಳಿವೆ. ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆಯುವ ಪ್ರಯತ್ನದಿಂದ ಸರ್ಕಾರಿ ಶಾಲೆಗಳಿಗೆ ಕುತ್ತು ತರುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾವೇಶದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಚಂದ್ರಕಲಾ, ಹೋರಾಟಗಾರರಾದ ಹೇಮಲತಾ, ಎಚ್.ಎಂ.ಬಸವರಾಜು,ಟಿ.ಆರ್.ಸುನೀಲ್, ಯು.ಕೆ.ಚಂದನ ಮತ್ತು ಶಾಲಾ ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.
ಪ್ರತಿಭಟನಾ ಮೆರವಣಿಗೆ:
ಸಮಾವೇಶಕ್ಕೂ ಮೊದಲು ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ರೋಟರಿ ಭವನದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, 40 ಸಾವಿರ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ನಮ್ಮೂರ ಸರ್ಕಾರಿ ಶಾಲೆಯನ್ನು ಉಳಿಸಬೇಕೆಂದು ಮಕ್ಕಳು ೋಷಣೆ ಕೂಗಿದರು.