ಲೊಕ್ಕನಹಳ್ಳಿಯಲ್ಲಿ ಗ್ರಾಮಸ್ಥರು ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು.
ಹನೂರು: ನಡುಕೇರಿ ಮಾರಮ್ಮನ ಮಾರಿಹಬ್ಬ ಅಂಗವಾಗಿ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅಳವಡಿಸಿದ್ದ ಡಿಜೆ ಸೌಂಡ್ಸ್‌ಗೆ ಅನುಮತಿ ಇಲ್ಲ ಎಂದು ಪೊಲೀಸರು ತಿಳಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ವರ್ಷಕ್ಕೊಮ್ಮೆ ನಡೆಯುವ ಮಾರಿಹಬ್ಬದಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಕಿರಿಕಿರಿಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಹೀಗಿರುವಾಗ ಡಿಜೆ ಬಳಸದಂತೆ ಪೊಲೀಸರು ತಿಳಿಸಿರುವುದು ಸರಿಯಲ್ಲ. ಆದ್ದರಿಂದ ಡಿಜೆಗೆ ಅನುಮತಿ ನೀಡುವಂತೆ ಮನವಿ ಮಾಡಿದರು. ಪೊಲೀಸರು ಈ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಮೂಲಕ ಸಮಾಧಾನ ಪಡಿಸಿದರು. ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.