ಮಂಡ್ಯದಲ್ಲಿ ಆಯೋಜಿಸಿದ್ದ ಸೈಕ್ಲಿಸ್ಟ್ ಸ್ಪರ್ಧೆಯಲ್ಲಿ ಜಯಗಳಿಸಿದ ಪಿ.ರವಿ ಮತ್ತು ಅಲ್ಫಾಸ್ ಅವರನ್ನು ಸರ್ಕಲ್ ಇನ್‌ಸ್ಪೆಕ್ಟರ್ ಅಭಿನಂದಿಸಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸೈಕ್ಲಿಂಗ್ ಸ್ಪಧೆಯಲ್ಲಿ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದ ಪಿ.ರವಿ ಚಿನ್ನದ ಪದಕ ಹಾಗೂ ಪಟ್ಟಣದ ನಿರ್ಮಲಾ ಕಾರ್ಮೆಂಟ್ ವಿದ್ಯಾರ್ಥಿ ಅಲ್ಫಾಸ್ ಕಂಚಿನ ಪದಕ ಗೆದ್ದಿದ್ದಾರೆ.
ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ರಾಜ್ಯಮಟ್ಟದ ವೇದಿಕೆಗೆ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಆಮೇಚೂರ್ ಸೈಕ್ಲಿಂಗ್ ಅಸೋಸಿಯೇಷನ್‌ನ ಅಂಗ ಸಂಸ್ಥೆಯಾದ ಮಂಡ್ಯ ಜಿಲ್ಲಾ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಷನ್‌ನಿಂದ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಈ ಇಬ್ಬರು ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪಟ್ಟಣದ ವೃತ್ತ ನಿರೀಕ್ಷಕ ಎನ್.ಜಯಕುಮಾರ್ ಅವರು ಕ್ರೀಡಾ ಪಟುಗಳನ್ನು ಕಚೇರಿಗೆ ಕರೆಸಿ ಸನ್ಮಾನಿಸಿದರು.
ಈ ಸಾಧನೆ ತಂಡದ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸಕ್ಕೆ ದೊರೆತ ಅಮೂಲ್ಯ ಪ್ರತಿಫಲವಾಗಿದೆ. ಪ್ರತಿಭಾವಂತ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ತರಬೇತುದಾರ ಸವಿತಾ ರಾಜ್ ಹಾರೈಸಿದರು.