ಗುಂಡ್ಲುಪೇಟೆ ಪಟ್ಟಣದ ಸ್ಮಾರ್ಟ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಸ್ಮಾರ್ಟ್ ಕಲೋತ್ಸವ ಕಾರ್ಯಕ್ರಮವನ್ನು ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಬಿ.ಎಂ.ಬಸಪ್ಪ, ಗೋಪಾಲಕೃಷ್ಣಭಟ್, ರಾಜೇಶ್, ಬಿ.ಎಂ.ಶಿವಾನಂದಸ್ವಾಮಿ, ಡಾ.ಡಿ.ಎಸ್. ಗುರು, ದೇವನೂರು ಶಿವಮಲು,್ಲ ಪ್ರಸಾದ್ ಇದ್ದರು. 
ಚಾಮರಾಜನಗರ

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲೂ ಪಾಲ್ಗೊಳ್ಳಿ

ಗುಂಡ್ಲುಪೇಟೆ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.
ಪಟ್ಟಣದ ಸ್ಮಾರ್ಟ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಸ್ಮಾರ್ಟ್ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಗಳು ಕೇವಲ ಫಲಿತಾಂಶ ಕೊಡಿಸುವ ಜಿದ್ದಿಗೆ ಬೀಳುವ ಬದಲು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಶಿಕ್ಷಣ ಕೊಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ ಮತ್ತು ಸಂಗೀತ ಸೇರಿದಂತೆ ಸಾಂಸ್ಕೃತಿಕ ಪ್ರದರ್ಶನಗಳು ಸಭಿಕರ ಮೆಚ್ಚುಗೆ ಗಳಿಸಿದವು. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಬಿ.ಎಂ.ಬಸಪ್ಪ, ಹಿಮಗಿರಿ ಟ್ರಸ್ಟ್‌ನ ಗೌರವಾಧ್ಯಕ್ಷ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಬಿ.ಎಂ.ಶಿವಾನಂದಸ್ವಾಮಿ, ಖಜಾಂಚಿ ಶಿವಕುಮಾರ್, ಸಂಯೋಜಕಿ ಅಂಬಿಕಾ ಪ್ರವೀಣ್, ಮಾನಸಗಂಗೋತ್ರಿಯ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ.ಡಿ.ಎಸ್.ಗುರು, ಕಾಡಾ ಮಾಜಿ ಅಧ್ಯಕ್ಷ ದೇವನೂರು ಶಿವಮಲ್ಲು ಹಾಗೂ ಮೂಖಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸಾದ್, ಪ್ರಾಂಶುಪಾಲೆ ಶ್ವೇತಾ ಎಸ್.ಗೌಡ ಹಾಗೂ ಇತರರು ಇದ್ದರು.