ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಂದಹಳ್ಳಿ ಗ್ರಾಮದ ಸಿದ್ದರಾಜು
ಯಳಂದೂರು: ತಾಲೂಕಿನ ಮೆಳ್ಳಹಳ್ಳಿ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ತಾಲೂಕಿನ ಕಂದಹಳ್ಳಿ ಗ್ರಾಮದ ಸಿದ್ದರಾಜು(45) ಮೃತರು. ಸಂತೆಮರಹಳ್ಳಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಮರಳಿ ನಡೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಬೈಕ್ ಗುದ್ದಿ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಸಂತೆಮರಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.