ಟ್ಯಾಂಕರ್ ನೀರು ಪಡೆಯಲು ಹುತ್ತೂರಿನಲ್ಲಿ ಜನರು ಸರತಿ ಸಾಲಿನಲ್ಲಿ ನಿಂತಿರುವುದು.
- ಹುತ್ತೂರು ಗ್ರಾಮ
- ಕುಡಿಯುವ ನೀರಿನ ಸಮಸ್ಯೆ
ಹನೂರು: ತಾಲೂಕಿನ ಹುತ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿದೆ.
ಗ್ರಾಮದಲ್ಲಿ ಬಡ ಕುಟುಂಬದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಕೂಲಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಒಂದು ತಿಂಗಳಿನಿಂದಲೂ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಪಂ ಆಡಳಿತ ಸಮರ್ಪಕ ನೀರು ಪೂರೈಕೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿತ್ತು. ಪರಿಣಾಮ ಕಳೆದ 3 ದಿನಗಳಿಂದ ನೀರಿನ ಸಮಸ್ಯೆ ತಾರಕಕ್ಕೇರಿತ್ತು.
ಗ್ರಾಮಸ್ಥರು ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಪಂ ಅಧಿಕಾರಿಗಳು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ನೀರು ಸಾಕಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.