ಕೊಳ್ಳೇಗಾಲ ಬಸ್ ನಿಲ್ದಾಣದ ಸಮೀಪ ನಿರ್ಮಿಸಿರುವ ಪೊಲೀಸ್ ಚೌಕಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಬುಧವಾರ ಚಾಲನೆ ನೀಡಿದರು. ಡಿವೈಎಸ್ಪಿ ಮೋಹನ್, ಅಪರಾಧ ವಿಭಾಗದ ಪಿಎಸ್‌ಐ ಉಮಾವತಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್, ಪಿಎಸ್‌ಐ ಚೆಲುವರಾಜು ಇದ್ದರು. 
ಚಾಮರಾಜನಗರ

ಮೂರು ಪೊಲೀಸ್ ಚೌಕಿ ಕಾರ್ಯಾರಂಭ

ಕೊಳ್ಳೇಗಾಲ : ಪಟ್ಟಣದ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ನಿರ್ಮಾಣವಾಗಿರುವ ಮೂರು ಪೊಲೀಸ್ ಚೌಕಿ ಗಳಿಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸುವ್ಯವಸ್ಥೆ ಪಾಲನೆ ನಿಟ್ಟಿನಲ್ಲಿ ಬಸ್ ನಿಲ್ದಾಣ, ಎಡಿಬಿ, ಎಂಜಿಎಸ್‌ವಿ ವೃತ್ತದಲ್ಲಿ ಪೊಲೀಸ್ ಚೌಕಿ ಕಾರ್ಯಾರಂಭಮಾಡಿವೆ.
ಬಿಳಿಗಿರಿರಂಗನ ಬೆಟ್ಟ, ಮಹದೇಶ್ವರ ಬೆಟ್ಟ ಸೇರಿದಂತೆ ಸುತ್ತಮುತ್ತಲಿರುವ ಧಾರ್ಮಿಕ ಕೇಂದ್ರಗಳಿಗೆ ಬೆಂಗಳೂರು, ಮೈಸೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ವಾಹನಗಳು, ಜನರು ಕೊಳ್ಳೇಗಾಲ ಪಟ್ಟಣ ಮೂಲಕವೇ ಹೋಗ ಬೇಕಾಗಿದೆ. ಹಾಗಾಗಿ ಆಗಾಗ್ಗೆ ಸಂಚಾರ ಸಿಕ್ಕು ಉಂಟಾಗುತ್ತದೆ.
ಹಾಗಾಗಿ ತಾತ್ಕಾಲಿಕವಾಗಿ ಬೇರೆ ಬೇರೆ ಠಾಣೆಗಳಿಂದ ಆರು ಸಿಬ್ಬಂದಿ ನಿಯೋಜನೆ ಮಾಡಿಕೊಂಡಿದ್ದು,
ಸಂಚಾರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ಕೊಳ್ಳೇಗಾಲದಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಡಿವೈಎಸ್ಪಿ ಮೋಹನ್, ಅಪರಾಧ ವಿಭಾಗದ ಪಿಎಸ್‌ಐ ಉಮಾವತಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್, ಅಪರಾಧ ವಿಭಾಗದ ಪಿಎಸ್‌ಐ ಚೆಲುವರಾಜು ಹಾಗೂ ಸಿಬ್ಬಂದಿ ಇದ್ದರು.