ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ಗ್ರಾಮದ ಬಲಚವಾಡಿ ಪುಟ್ಟಬಸಪ್ಪ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಗೇಂದ್ರ, ಸುದರ್ಶನ್, ಸವಿತಾ ಇದ್ದರು. 
ಚಾಮರಾಜನಗರ

ಮಲೇರಿಯಾ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ

ಲಲಾಟಾಕ್ಷ ಎಸ್
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬಲಚವಾಡಿ ಪುಟ್ಟಬಸಪ್ಪ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ ಮಾತನಾಡಿ, ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಚಳಿ, ಜ್ವರ ಇವು ಮಲೇರಿಯಾ ರೋಗಲಕ್ಷಣಗಳು. ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ ಸಂಪೂರ್ಣ ಚಿಕಿತ್ಸೆಯಿಂದ ಮಲೇರಿಯಾ ಗುಣಪಡಿಸಬಹುದು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸುವುದು, ನೀರಿನ ಸಂಗ್ರಹಗಳನ್ನು ಭದ್ರವಾಗಿ ಮುಚ್ಚಿಡುವುದು, ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಸುದರ್ಶನ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸವಿತಾ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಇದ್ದರು.