ಹುಬ್ಬೆಹುಣಸೆ ಕೆರೆಗೆ ನೀರು ತುಂಬಿಸುವ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ರಘುಪತಿ, ಉಮೇಶ್, ರಾಮಕೃಷ್ಣ ಇತರರಿದ್ದರು.
ಹನೂರು: ತಾಲೂಕಿನ ಉದ್ದನೂರು ಸಮೀಪದ ಹುಬ್ಬೆಹುಣಸೆ ಕೆರೆಗೆ ಕಾವೇರಿ ನೀರು ತುಂಬಿಸುವ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಶನಿವಾರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.
ಕೆರೆಗೆ ನೀರು ತುಂಬಿಸುವ ಸಂಬಂಧ ರೂಪಿಸಿರುವ ಯೋಜನೆಯ ನೀಲ ನಕ್ಷೆ ಯನ್ನು ಪರಿಶೀಲಿಸಿ ಮಾತನಾಡಿದ ಶಾಸಕ ಮಂಜುನಾಥ್, ಹುಬ್ಬೆಹುಣಸೆ ಕೆರೆ ಭಾಗದಲ್ಲಿ ನೂರಾರು ರೈತರು ಕೃಷಿ ಮಾಡುತ್ತಿದ್ದಾರೆ. ಈ ಕೆರೆಗೆ ನದಿ ಮೂಲದಿಂದ ನೀರು ತುಂಬಿಸಬೇಕೆನ್ನುವುದು ರೈತರ ಹಲವು ವರ್ಷದ ಬೇಡಿಕೆ. ಈ ಸಂಬಂಧ ಕ್ರಿಯಾಯೋಜನೆ ರೂಪಿಸಿದ್ದು, ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಕೆಲಸ ಕಾರ್ಯರೂಪಕ್ಕೆ ಬರಲಿದ್ದು, ರೈತರಿಗೆ ಅನುಕೂಲವಾಗಲಿದೆ. ಆದ್ದರಿಂದ ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಕಾವೇರಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ರಘುಪತಿ, ಇಇ ಉಮೇಶ್, ಎಇಇ ರಾಮಕೃಷ್ಣ, ಎಇ ವಿಕಾಸ್ ಹಾಗೂ ಇತರರಿದ್ದರು.