ವಿದ್ಯುತ್ ಖಾಸಗೀಕರಣವನ್ನು ಖಂಡಿಸಿ ಹನೂರಿನಲ್ಲಿ ಕೆಪಿಟಿಸಿಎಲ್ ಸಂಘದಿಂದ ಪ್ರತಿಭಟನೆ ನಡೆಯಿತು. ರಾಜೇಂದ್ರ ಪ್ರಸಾದ್, ಮಹದೇವಸ್ವಾಮಿ, ರಿಯಾಜ್ ಇತರರಿದ್ದರು.  
ಚಾಮರಾಜನಗರ

ಹನೂರಿನಲ್ಲಿ ಸೆಸ್ಕ್ ನೌಕರರಿಂದ ಪ್ರತಿಭಟನೆ

ಎಂ.ರವಿ
ಹನೂರು: ವಿದ್ಯುತ್ ಖಾಸಗೀಕರಣವನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಗುರುವಾರ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹನೂರಿನ ಸೆಸ್ಕ್ ಉಪ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕಚೇರಿಯ ಮುಂಭಾಗ ಜಮಾಯಿಸಿದ್ದ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸರ್ಕಾರದ ನಡೆಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಕಾರರು ಮಾತನಾಡಿ, ರಾಜ್ಯ ಸರ್ಕಾರ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 200 ಯೂನಿಟ್ ವಿದ್ಯುತ್ ನೀಡಲಾಗುತ್ತಿದೆ. ಜತೆಗೆ ರೈತರಿಗೆ ವಿವಿಧ ಯೋಜನೆಯಡಿ ವಿದ್ಯುತ್ ಸೌಕರ್ಯ ಒದಗಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ 2026ರ ಅಧಿವೇಶನದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವುದು ನಿಜಕ್ಕೂ ಖಂಡನೀಯ. ಇದರಿಂದ ಇದರಿಂದ ಎಲ್ಲರಿಗೂ ಅನ್ಯಾಯವಾಗಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮನಗಂಡು ಕೈಗೊಂಡಿರುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಮಹದೇವಸ್ವಾಮಿ, ಪದಾಧಿಕಾರಿಗಳಾದ ರಿಯಾಜ್, ಮಣಿಕಂಠ, ಮನೋಜ್‌ಕುಮಾರ್ ಹಾಗೂ ಇನ್ನಿತರರಿದ್ದರು.
ವಿದ್ಯುತ್ ಖಾಸಗೀಕರಣವನ್ನು ಖಂಡಿಸಿ ಹನೂರಿನಲ್ಲಿ ಕೆಪಿಟಿಸಿಎಲ್ ಸಂಘದಿಂದ ಪ್ರತಿಭಟನೆ ನಡೆಯಿತು. ರಾಜೇಂದ್ರ ಪ್ರಸಾದ್, ಮಹದೇವಸ್ವಾಮಿ, ರಿಯಾಜ್ ಇತರರಿದ್ದರು.