ಮಲೆಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಮುಖಂಡರು ಪ್ರತಿಭಟನೆ ನಡೆಸಿದರು.
- ಸಮರ್ಪಕ ಆಂಬುಲೆನ್ಸ್ ಸೇವೆ ಒದಗಿಸುವಂತೆ ಒತ್ತಾಯ
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊರೆದೊಯ್ಯಲು ಆಂಬುಲೆನ್ಸ್ ಸಿಗದ ಹಿನ್ನೆಲೆಯಲ್ಲಿ ಬೇಡಗಂಪಣ ಮುಖಂಡರು ಬುಧವಾರ ಸರ್ಕಾರಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ಆಸ್ಪತ್ರೆ ಮುಂಭಾಗ ನೆರೆದಿದ್ದ ಪ್ರತಿಭಟನಾಕಾರರು ಆರೋಗ್ಯ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮ.ಬೆಟ್ಟದ ಜೋಡಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಗಾಯಗೊಂಡಿದ್ದ. ಈತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೆ ಜೀವ ಉಳಿಸಬಹುದಿತ್ತು. ಆದರೆ ಆಂಬುಲೆನ್ಸ್ ಸಿಗದ ಪರಿಣಾಮ ಯುವಕ ಮೃತಪಟ್ಟಿದ್ದಾನೆ. ಮ.ಬೆಟ್ಟದ ಸುತ್ತಮುತ್ತ 18 ಗ್ರಾಮಗಳಿವೆ. ಜತೆಗೆ ಜಾತ್ರೆ ವೇಳೆ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ ಇಲ್ಲಿ 2 ತುರ್ತು ವಾಹನ ಮಾತ್ರ ಇದ್ದು, ತುರ್ತು ಸಂದರ್ಭಕ್ಕೆ ಸಾಲುತ್ತಿಲ್ಲ. ಇದರಿಂದ ಇಂತಹ ಘಟನೆಗೆ ಕಾರಣವಾಗಿದೆ.
ಜತೆಗೆ ಇಲ್ಲಿ ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ವೈದ್ಯರು ಕೊಳ್ಳೇಗಾಲ, ಹನೂರು ಹಾಗೂ ರಾಮಾಪುರದಿಂದ ಬರಬೇಕಿದ್ದು, ಕಾಯುವಂತಾಗಿದೆ. ಇದರಿಂದ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಆಂಬುಲೆನ್ಸ್ ಸೇವೆ ಸಮರ್ಪಕವಾಗಿ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ