ಗುಂಡ್ಲುಪೇಟೆ ಪಟ್ಟಣದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರನ್ನು ಮಸ್ಲಿಂ ಮುಖಂಡರು ಸನ್ಮಾನಿಸಿದರು.
- ಈದ್ಗಾ ಮೈದಾನದಲ್ಲಿ ಸಮಾವೇಶಗೊಂಡ ಮುಸ್ಲಿಮರು ಶುಭಾಶಯ ವಿನಿಮಯ ಮಾಡಿಕೊಂಡರು
ಗುಂಡ್ಲುಪೇಟೆ: ಪಟ್ಟಣದಲ್ಲಿ ಮುಸ್ಲಿಮರು ಶನಿವಾರ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಿಸಿದರು.
ಈದ್ಗಾ ಮೈದಾನದಲ್ಲಿ ಸಮಾವೇಶಗೊಂಡ ಮುಸ್ಲಿಮರು ಶುಭಾಶಯ ವಿನಿಮಯ ಮಾಡಿಕೊಂಡರು. ಬಡವರಿಗೆ ತಮ್ಮ ಕೈಲಾದ ಮಟ್ಟಿಗೆ ದಾನ ಧರ್ಮ ಮಾಡಿದರು. ಧರ್ಮಗುರುಗಳ ಸಮ್ಮುಖದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿ ಶುಭಾಶಯ ಕೋರಿದರು.