ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದ ಮಾರಮ್ಮ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು. 
ಚಾಮರಾಜನಗರ

ಹೊಂಗಹಳ್ಳಿ ಗ್ರಾಮದಲ್ಲಿ ಧಾರ್ಮಿಕ ಕೈಂಕರ್ಯ

ಪ್ರಮುಖ ಮುಖ್ಯಾಂಶಗಳು

  • ಹೊಂಗಹಳ್ಳಿ ಗ್ರಾಮ
  • ಮಾರಮ್ಮನವರ ದೇವಾಲಯ
ಗುಂಡ್ಲುಪೇಟೆ: ತಾಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ಮಾರಮ್ಮನವರ ದೇವಾಲಯದಲ್ಲಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಅಂಕಸ್ಥಾಪನೆಗೆ ಸಿದ್ಧತೆ ಭರದಿಂದ ಸಾಗಿದೆ.
ಕಾರ್ಯಕ್ರಮದ ಅಂಗವಾಗಿ ಜ.18, 19 ಹಾಗೂ 20ರಂದು ನಾನಾ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಗ್ರಾಮದ ಬೀದಿಗಳನ್ನು ಶುಚಿಗೊಳಿಸಿ ವಿದ್ಯುತ್ ದೀಪ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗುತ್ತಿದೆ.
ಜ.21ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಿರುವ ಧಾರ್ಮಿಕ ಸಭೆಯಲ್ಲಿ ಪಡಗೂರು ಅಡವಿ ಮಠಾಧ್ಯಕ್ಷ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ದೇವನೂರು ಮಠಾಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ, ಮೂಡುಗೂರು ಮಠಾಧ್ಯಕ್ಷ ಶ್ರೀ ಇಮ್ಮಡಿ ಉದ್ದಾನೇಶ್ವರ ಸ್ವಾಮೀಜಿ, ಹಂಗಳ ಹಳ್ಳದ ಮಠಾಧ್ಯಕ್ಷ ಶ್ರೀ ಜಡೇಸ್ವಾಮೀಜಿ, ಸೋಮಹಳ್ಳಿ ಮಠಾಧ್ಯಕ್ಷ ಶ್ರೀ ಸಿದ್ದಮಲ್ಲ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ಹಲವಾರು ಮಠಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಹೊರಗಿನಿಂದ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.