ಪೊನ್ನಾಚಿ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಕಡವೆಯನ್ನು ರಕ್ಷಿಸಿದ ಗ್ರಾಮಸ್ಥರು.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ಕಡವೆಯನ್ನು ಗ್ರಾಮಸ್ಥರು ರಕ್ಷಿಸಿದರು. ಬೆಳಗ್ಗೆ 8ರ ವೇಳೆಯಲ್ಲಿ ಸಮೀಪದ ಅರಣ್ಯ ಪ್ರದೇಶದಿಂದ ಗ್ರಾಮಕ್ಕೆ ಆಗಮಿಸಿದ್ದ ಕಡವೆ ಮೇಲೆ ಬೀದಿ ನಾಯಿಗಳು ಸುತ್ತುವರಿದು ದಾಳಿ ನಡೆಸುತ್ತಿದ್ದವು. ಇದನ್ನು ಕಂಡ ಗ್ರಾಮಸ್ಥರು ಬೀದಿ ನಾಯಿಗಳನ್ನು ಓಡಿಸಿದರು. ದಾಳಿಯಿಂದ ಗಾಯಗೊಂಡಿದ್ದ ಕಡವೆಯನ್ನು ಕೆಲಕಾಲ ಆರೈಕೆ ಮಾಡಿದರು. ಬಳಿಕ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದರು. ಸ್ಥಳಕ್ಕಾಗಮಿಸಿ ಸಿಬ್ಬಂದಿ ರಕ್ಷಿಸಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಡವೆಯನ್ನು ವಶಕ್ಕೆ ಪಡೆದ ಅರಣ್ಯ ಸಿಬ್ಬಂದಿ, ಸಮೀಪದ ಅರಣ್ಯ ಪ್ರದೇಶದೊಳಗೆ ಬಿಟ್ಟರು.